- Advertisement -
- Advertisement -
ವಿಟ್ಲ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಯ ಅಂಗಡಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಘಟನೆ ವಿಟ್ಲದ ಕುದ್ದುಪದವು ಎಂಬಲ್ಲಿ ನಡೆದಿದೆ.
ಕುದ್ದುಪದವು ನಿವಾಸಿ ಅಶ್ರಫ್ ಎಂಬಾತ ಕೆಲವು ದಿನಗಳ ಹಿಂದೆ ಅಂಗಡಿಗೆ ಬಂದಿದ್ದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ವೆಸಗಿದ್ದ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಅಶ್ರಫ್ ನನ್ನು ವಿಟ್ಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಕೇವಲ ಒಂದು ವಾರದಲ್ಲಿ ಆರೋಪಿಗೆ ಜಾಮೀನು ಮಂಜೂರಾಗಿತ್ತು.
ಇದೀಗ ಆರೋಪಿ ಅಶ್ರಫ್ ನ ಗೂಡಂಗಡಿಗೆ ಯಾರೋ ಕಿಡಿಗೇಡಿಗಳು ಶುಕ್ರವಾರ ತಡರಾತ್ರಿ ಬೆಂಕಿ. ತಡರಾತ್ರಿ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಆ ದಾರಿಯಾಗಿ ಸಾಗುತ್ತಿದ್ದ ವಾಹನ ಚಾಲಕರು ಇದನ್ನು ಗಮನಿಸಿ ಬೆಂಕಿ ನಂದಿಸಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Advertisement -