Thursday, June 4, 2026
Homeಕರಾವಳಿಮಂಗಳೂರುಮಂಗಳೂರು; ನದಿಯಲ್ಲಿ ಈಜಲು ತೆರಳಿದ ಇಬ್ಬರು ಯುವಕರು ನೀರು ಪಾಲು

ಮಂಗಳೂರು; ನದಿಯಲ್ಲಿ ಈಜಲು ತೆರಳಿದ ಇಬ್ಬರು ಯುವಕರು ನೀರು ಪಾಲು

- Advertisement -
- Advertisement -

ಮಂಗಳೂರು; ನದಿಯಲ್ಲಿ ಈಜಲು ತೆರಳಿದ ಇಬ್ಬರು ಯುವಕರು ನೀರು ಪಾಲಾಗಿರುವ ಘಟನೆ ಮರವೂರು ವೆಂಟೆಡ್ ಡ್ಯಾಂನ ಪಕ್ಕದಲ್ಲಿರುವ ರೈಲ್ವೆ ಸೇತುವೆಯ ಬಳಿಯ ಫಲ್ಗುಣಿ ನದಿಯಲ್ಲಿ ನಡೆದಿದೆ. ಯುವಕರನ್ನು ಕೊಟ್ಟಾರಚೌಕಿ ನಿವಾಸಿ ಸುಮಿತ್ (20) ಹಾಗೂ ಉರ್ವಸ್ಟೋರ್ ನಿವಾಸಿ ಅನೀಶ್ (19) ಮೃತರು.

ನಾಲ್ವರು ಯುವಕರು ಭಾನುವಾರ ಸಂಜೆ 4 ಗಂಟೆಗೆ ನದಿಯಲ್ಲಿ ಈಜಲು ಹೋಗಿದ್ದರು. ಸುಮಿತ್ ಹಾಗೂ ಅನೀಶ್ ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದಾರೆ. ಜೊತೆಗಿದ್ದ ಕೋಡಿಕಲ್ ನಿವಾಸಿಗಳಾದ ಅರುಣ್(19) ಹಾಗೂ ದೀಕ್ಷಿತ್(18) ಈಜಿ ಪಾರಾಗಿದ್ದಾರೆ.

ನಾಪತ್ತೆಯಾದವರ ಹುಡುಕಾಟಕ್ಕಾಗಿ ಅಗ್ನಿಶಾಮಕ ದಳ ಹಾಗೂ ಮುಳುಗು ತಜ್ಞರು ಆಗಮಿಸಿ, ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಬಜ್ಪೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

- Advertisement -

Latest News

error: Content is protected !!