Thursday, June 4, 2026
Homeಕರಾವಳಿಬಂಟ್ವಾಳ:ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

ಬಂಟ್ವಾಳ:ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

- Advertisement -
- Advertisement -

ಬಂಟ್ವಾಳ:  ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಕಾರು ಉರುಳಿದ ಘಟನೆ  ಬಿ.ಸಿ.ರೋಡು-ಪುಂಜಾಲಕಟ್ಟೆ ಹೆದ್ದಾರಿಯ ಜಕ್ರಿಬೆಟ್ಟು ಸಮೀಪದ ಮಣ್ಣಾಪು ಎಂಬಲ್ಲಿ ನಡೆದಿದೆ.ಘಟನೆಯಲ್ಲಿ ಕೇರಳ ನಿವಾಸಿಗಳಾದ ಅರುಣ್, ಪ್ರಮೋದ್ ಮತ್ತು ಅರುಣ್ ಎಂಬವರಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ‌ಹೊರರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೋಮವಾರ ಸಂಜೆ 4.30ರ ಸುಮಾರಿಗೆ ಅಪಘಾತವಾಗಿದ್ದು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಘಟನೆಯಲ್ಲಿ ಆಲ್ಟೋ ಕಾರು ಸಂಪೂರ್ಣ ಜಖಂಗೊಂಡಿದೆ.ಅಲ್ಲದೇ  ಸ್ಥಳೀಯ ನಿವಾಸಿಯಾದ ಸಂಜೀವ ಮೂಲ್ಯ ಅವರ ಕಾಂಪೌಂಡ್ ಹಾನಿಯಾಗಿದೆ.

ಸ್ಥಳಕ್ಕೆ ಆಗಮಿಸಿದ ಸಂಚಾರಿ (ಟ್ರಾಫಿಕ್‌) ಪೊಲೀಸರು ಚಾಲಕನ ಬಗ್ಗೆ ಮಾಹಿತಿ ಪಡೆದು ವಿಚಾರಿಸಿದಾಗ ಆತ ಅಮಲು ಪದಾರ್ಥ ಸೇವಿಸಿ ಅಜಾಗರೂಕತೆಯಿಂದ ಚಾಲನೆ ಮಾಡಿರುವುದು ಸಾಬೀತಾಗಿದೆ. ಹಾಗಾಗಿ ಡ್ರಿಂಕ್ ಅಂಡ್‌ ಡ್ರೈವ್ ಪ್ರಕರಣ ದಾಖಲಿಸಲಾಗಿದೆ ಎಂದು ಸಂಚಾರಿ ಎಸ್.ಐ.ಸುತೇಶ್ ತಿಳಿಸಿದ್ದಾರೆ. ಚಿಕ್ಕಮಗಳೂರು ‌ಕಡೆಯಿಂದ ಕೇರಳಕ್ಕೆ ಹೋಗುವ ಸಂದರ್ಭದಲ್ಲಿ ಅತೀ ವೇಗವಾಗಿ ಚಲಾಯಿಸಿದ ಪರಿಣಾಮ ನಿಯಂತ್ರಣ ಕಳೆದುಕೊಂಡು ಚರಂಡಿಗೆ ಬಿದ್ದಿದೆ.

- Advertisement -

Latest News

error: Content is protected !!