- Advertisement -
- Advertisement -
ಮಂಗಳೂರು: ವಿಧಾನಪರಿಷತ್ ಉಪ ಚುನಾವಣೆಗೆ ದಕ್ಷಿಣಕನ್ನಡ ಜಿಲ್ಲೆಯ ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು ಅವರನ್ನು ಘೋಷಣೆ ಮಾಡಲಾಗಿದೆ.

ಕಿಶೋರ್ ಕುಮಾರ್ ಪುತ್ತೂರು ಅವರು ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಇನ್ನು ಇವರಿಗೆ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಅವರು ಶುಭ ಹಾರೈಸಿದ್ದಾರೆ. ಆತ್ಮೀಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರನ್ನು ಪಕ್ಷದ ವರಿಷ್ಟರು ವಿಧಾನಪರಿಷತ್ ನ ಅವಿಭಜಿತ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರದ ಉಪಚುನಾವಣೆಯ ಅಭ್ಯರ್ಥಿಯನ್ನಾಗಿ ಘೋಷಿಸಿದ್ದಾರೆ.ಅಭಿನಂದನೆಗಳು. ಅತೀ ಹೆಚ್ಚಿನ ಮತಗಳಿಂದ ಜಯಗಳಿಸಿ ಎಂದು ಪ್ರೀತಿಪೂರ್ವಕ ಹಾರೈಕೆ ಎಂದು ಫೇಸ್ ಬುಕ್ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.
- Advertisement -