Thursday, June 25, 2026
Homeತಾಜಾ ಸುದ್ದಿಮೈಸೂರು : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಸಾಹಿತಿ ಹಂಪ ನಾಗಾರಾಜಯ್ಯ ಚಾಲನೆ

ಮೈಸೂರು : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಸಾಹಿತಿ ಹಂಪ ನಾಗಾರಾಜಯ್ಯ ಚಾಲನೆ

- Advertisement -
- Advertisement -

ಮೈಸೂರು : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಸಾಹಿತಿ ಹಂಪ ನಾಗಾರಾಜಯ್ಯ ಚಾಲನೆ ನೀಡಿದ್ದಾರೆ.ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ವೃಶ್ಚಿಕ ಲಗ್ನದಲ್ಲಿ ಹಿರಿಯ ಸಾಹಿತಿ ಪ್ರೊ. ಹಂಪ ನಾಗರಾಜಯ್ಯ ಮೈಸೂರು ದಸರಾಗೆ ಚಾಲನೆ ಕೊಟ್ಟರು.ಬಳಿಕ ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಕಾರ್ಯಕ್ರಮದಲ್ಲಿ ಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಹೆಚ್.ಡಿ.ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ. ವಿ.ಸೋಮಣ್ಣ, ಶೋಭಾ ಕರಂದ್ಲಾಜೆ, ರಾಝ್ಯ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪ, ಕೆ. ವೆಂಕಟೇಶ್, ಶಿವರಾಜ್ ತಂಗಡಗಿ, ಹೆಚ್.ಕೆ.ಪಾಟೀಲ್, ರಾಮಲಿಂಗ ರೆಡ್ಡಿ, ಈಶ್ವರ್ ಖಂಡ್ರೆ, ಭೈರತಿ ಸುರೇಶ್ ಭಾಗವಹಿಸಲಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದಾರೆ.

- Advertisement -

Latest News

error: Content is protected !!