Thursday, June 4, 2026
Homeಕರಾವಳಿಉಡುಪಿಸಂಸದ ಕೋಟ ಶ್ರೀನಿವಾಸ ಪೂಜಾರಿ ಹೆಸರಿನಲ್ಲಿ ನಕಲಿ ಖಾತೆ ತೆರೆದು ಸೋಷಿಯಲ್ ಮೀಡಿಯಾದಲ್ಲಿ ಹಣಕ್ಕಾಗಿ ಬೇಡಿಕೆ

ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೆಸರಿನಲ್ಲಿ ನಕಲಿ ಖಾತೆ ತೆರೆದು ಸೋಷಿಯಲ್ ಮೀಡಿಯಾದಲ್ಲಿ ಹಣಕ್ಕಾಗಿ ಬೇಡಿಕೆ

- Advertisement -
- Advertisement -

ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಹೆಸರಿನಲ್ಲಿ ಸೋಷಿಯಲ್ ಮೀಡಿಯಾದಲ್ಲಿ ದುಷ್ಕರ್ಮಿಗಳು ನಕಲಿ ಖಾತೆ ತೆರೆದು ಹಣಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೆಸರಿನಲ್ಲಿ ಅವರ ಫೋಟೋವನ್ನು ದುರುಪಯೋಗಪಡಿಸಿಕೊಂಡು ಇನ್ಸ್ಟಾಗ್ರಾಮ್ ನಲ್ಲಿ ನಕಲಿ ಖಾತೆ ತೆರೆದಿದ್ದಾರೆ. ಅಲ್ಲದೇ ಮೆಸೆಂಜರ್ ಮೂವಕ ಮೂಲಕ ಸಾರ್ವಜನಿಕರಿಂದ ಹಣಕ್ಕಾಗಿ ಬೇಡಿಕೆಯನ್ನು ಇಟ್ಟಿದ್ದಾರೆ ಅಂತಾ ದೂರಲಾಗಿದೆ.

ದುರುದ್ದೇಶಪೂರ್ವಕವಾಗಿ ಅಕ್ರಮ ಹಣವನ್ನು ಸಂಪಾದಿಸುವ ಹಾಗೂ ಹೆಸರನ್ನು ಕೆಡಿಸುವ ಉದ್ದೇಶದಿಂದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಹೆಸರಿನಲ್ಲಿ ನಕಲಿ ಖಾತೆಗಳನ್ನು ತೆರೆದ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಂಸದರ ವಕೀಲ ಶ್ಯಾಮಸುಂದರ ನಾಯರಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

- Advertisement -

Latest News

error: Content is protected !!