Friday, June 5, 2026
Homeಕರಾವಳಿಉಡುಪಿಉಡುಪಿ: ರಸ್ತೆ ದಾಟುತ್ತಿದ್ದಾಗ ಖಾಸಗಿ ಬಸ್ ಡಿಕ್ಕಿಯಾಗಿ ಪತಿ ಸಾವು, ಪತ್ನಿಗೆ ಗಂಭೀರ ಗಾಯ

ಉಡುಪಿ: ರಸ್ತೆ ದಾಟುತ್ತಿದ್ದಾಗ ಖಾಸಗಿ ಬಸ್ ಡಿಕ್ಕಿಯಾಗಿ ಪತಿ ಸಾವು, ಪತ್ನಿಗೆ ಗಂಭೀರ ಗಾಯ

- Advertisement -
- Advertisement -

ಉಡುಪಿ: ರಸ್ತೆ ದಾಟುತ್ತಿದ್ದಾಗ ಖಾಸಗಿ ಬಸ್ ಡಿಕ್ಕಿಯಾಗಿ ಪತಿ ಸಾವನ್ನಪ್ಪಿ, ಪತ್ನಿಗೆ ಗಂಭೀರ ಗಾಯಗಳಾಗಿರುವ ಘಟನೆ ಉಡುಪಿ ರಾಷ್ಟ್ರೀಯ ಹೆದ್ದಾರಿ 66 ರ ಮೂಳೂರಿನಲ್ಲಿ ನಡೆದಿದೆ.

 ದಾಟುತ್ತಿದ್ದ ದಂಪತಿಗೆ  ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಪತಿ ಸ್ಥಳದಲ್ಲೇ ಮೃತಪಟ್ಟರೆ, ಪತ್ನಿ ತೀವ್ರವಾಗಿ ಗಾಯಗೊಂಡ ಘಟನೆ ಬುಧವಾರ ರಾತ್ರಿ ನಡೆದಿದೆ.ಕಾಪು ಭಾರತ್ ನಗರದ ನಿವಾಸಿ ಹಿದಾಯತ್ತುಲ್ಲಾ (55) ಮೃತ ದುರ್ದೈವಿ. ಇವರ ಪತ್ನಿ ಸಾವರ್ ಎಂಬವರಿಗೆ ತೀವ್ರ ಗಾಯವಾಗಿದ್ದು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.  

ಉಚ್ಚಿಲ ಕಡೆಯಿಂದ ಕಾಪು ಕಡೆಗೆ ಹೋಗುತ್ತಿದ್ದ ಇವರು, ದಾರಿ ಮಧ್ಯೆ ಮೂಳೂರಿನಲ್ಲಿ ರಸ್ತೆಯ ಇನ್ನೊಂದು ಬದಿಯಲ್ಲಿರುವ ಹೋಟೆಲಿಗೆ ಹೋಗಲು ಬೈಕನ್ನು ನಿಲ್ಲಿಸಿ ಪತ್ನಿ ಜೊತೆ ರಸ್ತೆ ದಾಟುತಿದ್ದಾಗ ಉಡುಪಿ ಕಡೆಯಿಂದ ಮಂಗಳೂರು ಕಡೆ ಹೋಗುತ್ತಿದ್ದ ಖಾಸಗಿ ಬಸ್ ಇವರಿಬ್ಬರಿಗೆ ಡಿಕ್ಕಿಯಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಪತ್ನಿ ಓರ್ವ ಪುತ್ರ, ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿದ್ದ ಹಿದಾಯತ್ತುಲ್ಲಾ ರಜೆಯಲ್ಲಿ ಊರಿಗೆ ಬಂದಿದ್ದರು. ಕೆಲವೇ ದಿನಗಳಲ್ಲಿ ಮತ್ತೆ ಸೌದಿಗೆ ವಾಪಸ್ ಹೋಗುವವರಿದ್ದರು.ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!