Saturday, June 13, 2026
Homeಚಿಕ್ಕಮಗಳೂರುಚಿಕ್ಕಮಗಳೂರು : ಮುಳ್ಳಯ್ಯನಗಿರಿಯಲ್ಲಿ ಪ್ರಪಾತಕ್ಕೆ ಬಿದ್ದ ಕಾರು

ಚಿಕ್ಕಮಗಳೂರು : ಮುಳ್ಳಯ್ಯನಗಿರಿಯಲ್ಲಿ ಪ್ರಪಾತಕ್ಕೆ ಬಿದ್ದ ಕಾರು

- Advertisement -
- Advertisement -

ಚಿಕ್ಕಮಗಳೂರು : ಮುಳ್ಳಯ್ಯನಗಿರಿಯಲ್ಲಿ ಸುಮಾರು 250 ಅಡಿ ಎತ್ತರದ ಪ್ರದೇಶದಿಂದ  ಕಾರೊಂದು ಪ್ರಪಾತಕ್ಕೆ ಬಿದ್ದಿದೆ. ತೆಲಂಗಾಣ ಮೂಲದ ಕಾರು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದಿದೆ.ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ಸಮೀಪದ ಕವಿಕಲ್ ಗಂಡಿ ಬಳಿ ಘಟನೆ ನಡೆದಿದೆ.

ಕಾರಿನಲ್ಲಿ ಐವರಿಗೂ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.250 ಅಡಿ ಎತ್ತರದಿಂದ ಬೀಳುವಾಗ ಮರ, ರೆಂಬೆ-ಕೊಂಬೆಗಳಿಗೆ ಕಾರು ಸಿಲುಕಿ ಹಾಕಿಕೊಂಡಿದೆ.ಹಾಗಾಗಿ, ಕಾರು ಬೀಳುವ ವೇಗ ಕಡಿಮೆಯಾಗಿದೆ, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಪೊಲೀಸರು ಹಾಗೂ ಸ್ಥಳೀಯರು ಗಾಯಾಳುಗಳನ್ನ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

- Advertisement -

Latest News

error: Content is protected !!