Friday, June 5, 2026
Homeಕರಾವಳಿಉಡುಪಿಉಡುಪಿಯಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಗಳ ಬಂಧನ; ನಕಲಿ ಆಧಾರ್‌ ಕಾರ್ಡ್‌ ವಶಕ್ಕೆ

ಉಡುಪಿಯಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಗಳ ಬಂಧನ; ನಕಲಿ ಆಧಾರ್‌ ಕಾರ್ಡ್‌ ವಶಕ್ಕೆ

- Advertisement -
- Advertisement -

ಉಡುಪಿ: ಮಲ್ಪೆಗೆ ಮೀನುಗಾರಿಕಾ ಕಾರ್ಮಿಕರಾಗಿ ಉದ್ಯೋಗ ಆರಿಸಿಕೊಂಡು ಬಂದಿದ್ದ ಒಂಬತ್ತು ಮಂದಿ ಬಾಂಗ್ಲಾದೇಶಿಯರನ್ನು ಉಡುಪಿಯ ಮಲ್ಪೆ ವಡಬಾಂಡೇಶ್ವರ ಬಸ್‌ ನಿಲ್ದಾಣ ಬಳಿ ಪೊಲೀಸರು ಅ.11 ಶುಕ್ರವಾರದಂದು ಬಂಧಿಸಿದ್ದಾರೆ.

ಮಹಮ್ಮದ್ ಮಾಣಿಕ್ ಎಂಬಾತನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ತೆರಳಲು ಪ್ರಯತ್ನಿಸಿದ್ದ ವೇಳೆಯಲ್ಲಿ ಆತನನ್ನು ವಿಚಾರಣೆಗೆ ಒಳಪಡಿಸಿದಾಗ, ಆತ ಮಲ್ಪೆಯಲ್ಲಿ ಇರುವವರ ಬಗ್ಗೆ ಮಾಹಿತಿ ನೀಡಿದ್ದ. ಇಮಿಗ್ರೇಷನ್ ಅಧಿಕಾರಿಗಳ ಪರಿಶೀಲನೆ ವೇಳೆ ಈತ ಬಾಂಗ್ಲಾದೇಶದ ಮಾಣಿಕ್ ಚೌಕ್ ರಾಜಶಾಹಿ ಎಂದು ತಿಳಿದುಬಂದಿದೆ. ಈತನ ವಿಚಾರಣೆ ವೇಳೆ ಹಲವರು ಮಲ್ಪೆಯಲ್ಲಿರುವುದು ಪತ್ತೆಯಾಗಿದೆ.

ಹಕೀಂ ಅಲಿ, ಸುಜೋನ್, ಇಸ್ಮಾಯಿಲ್, ಕರೀಂ, ಸಲಾಂ, ರಾಜಿಕುಲ್‌, ಮೊಹಮ್ಮದ್ ಸೋಜಿಬ್, ಕಾಜೋಲ್‌, ಉಸ್ಮಾನ್ ಬಂಧಿತರು. ಇವರು ನಕಲಿ ದಾಖಲಾತಿ ಸೃಷ್ಟಿಸಿ ಮಲ್ಪೆಯಲ್ಲಿ ತಂಗಿದ್ದರು. ಆರೋಪಿಗಳ ಬಳಿ ನಕಲಿ ಆಧಾ‌ರ್ ಕಾರ್ಡ್ ಪತ್ತೆಯಾಗಿದೆ. ಆರೋಪಿ ಉಸ್ಮಾನ್ ಎಂಬಾತ ಅಕ್ರಮವಾಗಿ ಕರೆತಂದು ಇವರಿಗೆ ಉದ್ಯೋಗಕ್ಕೆ ವ್ಯವಸ್ಥೆ ಮಾಡಿದ್ದ ಎಂದು ತಿಳಿದು ಬಂದಿದೆ.

ಇನ್ನು ಮಲ್ಪೆ ಪೊಲೀಸರು ಇವರನ್ನು ವಶಕ್ಕೆ ಪಡೆದಿದ್ದು, ವಿಚಾರಣೆಯನ್ನು ಮುಂದುವರೆಸಿದ್ದಾರೆ.

- Advertisement -

Latest News

error: Content is protected !!