Thursday, June 4, 2026
Homeಅಪರಾಧದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸರ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸರ ಕಟ್ಟೆಚ್ಚರ

- Advertisement -
- Advertisement -

ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಗ್ಲಾದೇಶದ ಪ್ರಜೆಯೋರ್ವ ನಕಲಿ ಪಾಸ್‌ಪೋರ್ಟ್‌ ಮೂಲಕ ದುಬಾೖಗೆ ಪ್ರಯಾಣಿಸಲು ಯತ್ನಿಸಿದ್ದು, ಆತನನ್ನು ವಶಕ್ಕೆ ಪಡೆದ ಬಳಿಕ ಆತ ನೀಡಿದ ಮಾಹಿತಿಯಂತೆ ಉಡುಪಿಯಲ್ಲಿ ಹಲವು ಬಾಂಗ್ಲಾ ಪ್ರಜೆಗಳನ್ನು ಬಂಧಿಸಿರುವ ಪ್ರಕರಣದ ಬಳಿಕ ಮಂಗಳೂರಿನಲ್ಲೂ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ಪೊಲೀಸರು ಅನುಮಾನಾಸ್ಪದ ವ್ಯಕ್ತಿಗಳ ಮೇಲೆ ನಿಗಾ ಇಡುತ್ತಿದ್ದು, ಮುಂದಿನ ದಿನಗಳಲ್ಲಿ ಕಾರ್ಯಾಚರಣೆ ನಡೆಸಲಾಗುವುದು. ಹೊರ ರಾಜ್ಯಗಳ ಕಾರ್ಮಿಕರನ್ನು ಕೆಲಸಕ್ಕೆ ಸೇರಿಸಿಕೊಳ್ಳುವವರು ದಾಖಲೆಗಳನ್ನು ಸೂಕ್ತವಾಗಿ ಪರಿಶೀಲಿಸಬೇಕು. ಬಾಂಗ್ಲಾ ಅಥವಾ ಇತರ ದೇಶಗಳ ಕಾರ್ಮಿಕರು ಅಕ್ರಮವಾಗಿ ಕೆಲಸ ಮಾಡುತ್ತಿದ್ದರೆ ಉದ್ಯೋಗದಾತರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಸಿದ್ದಾರೆ.

ಇನ್ನು ಕರಾವಳಿಯಲ್ಲಿ ಬಾಂಗ್ಲಾದೇಶ ಮೂಲದ ಪ್ರಜೆಗಳು ಕಾರ್ಮಿಕರಾಗಿ ದುಡಿಯುತ್ತಿದ್ದಾರೆ ಎನ್ನುವ ಸಂಶಯ ಇತ್ತಾದರೂ, ಇಲ್ಲಿಯವರೆಗೆ ಸೂಕ್ತ ಸಾಕ್ಷ್ಯಾಧಾರಗಳೊಂದಿಗೆ ಯಾರನ್ನೂ ವಶಕ್ಕೆ ಪಡೆದಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟ್ಟಡ ನಿರ್ಮಾಣ, ಮೀನುಗಾರಿಕೆ ಬಂದರು, ಮರಳುಗಾರಿಕೆ, ಕೈಗಾರಿಕೆಗಳಲ್ಲಿ ಉತ್ತರ ಪ್ರದೇಶ, ಬಿಹಾರ, ಒಡಿಶಾ, ಪಶ್ಚಿಮ ಬಂಗಾಲ ಎಂದು ಹೇಳಿಕೊಂಡು ಸಾಕಷ್ಟು ಸಂಖ್ಯೆಯಲ್ಲಿ ಕಾರ್ಮಿಕರು ನೆಲೆಸಿದ್ದಾರೆ. ಒಂದು ಕಾಲದಲ್ಲಿ ಸ್ಥಳೀಯರು ಅಥವಾ ಉತ್ತರ ಕರ್ನಾಟಕ ಭಾಗದ ಕಾರ್ಮಿಕರು ಮಾಡುತ್ತಿದ್ದ ಕೆಲಸಗಳನ್ನು ಇಂದು ಉತ್ತರ ಭಾರತ ಭಾಗದ ಕಾರ್ಮಿಕರು ನಿರ್ವಹಿಸುತ್ತಿದ್ದಾರೆ.

- Advertisement -

Latest News

error: Content is protected !!