Saturday, June 6, 2026
Homeಕರಾವಳಿಬೆಳ್ತಂಗಡಿ; ನೆರಿಯದಲ್ಲಿ ನದಿಗೆ ಇಳಿದಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು

ಬೆಳ್ತಂಗಡಿ; ನೆರಿಯದಲ್ಲಿ ನದಿಗೆ ಇಳಿದಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು

- Advertisement -
- Advertisement -

ಬೆಳ್ತಂಗಡಿ; ನದಿಗೆ ಇಳಿದಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನೆರಿಯದಲ್ಲಿ ನಡೆದಿದೆ.


ನೆರಿಯ ಗ್ರಾಮದ ತೋಟತ್ತಾಡಿ ಪಿತ್ತಿಲು ನಿವಾಸಿ ಶಿವಕುಮಾರ್ ಮೃತ ಯುವಕ. ಶಿವಕುಮಾರ್ ಭಾನುವಾರ ಗೆಳೆಯರೊಂದಿಗೆ ಮೀನು ಹಿಡಿಯಲು ನೆರಿಯ ಗ್ರಾಮದ ಎಸ್ಟೇಟ್ ಒಂದರ ಸಮೀಪ ನದಿಗೆ ಹೋಗಿದ್ದ ಎನ್ನಲಾಗಿದೆ. ನದಿಯಲ್ಲಿ ಸಂಜೆಯ ವೇಳೆ ಈತ ನಾಪತ್ತೆಯಾಗಿದ್ದ.

ಈತನಿಗಾಗಿ ಸ್ಥಳೀಯರ  ಸಹಕಾರದೊಂದಿಗೆ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಆತನ ಮೃತದೇಹ ಪತ್ತೆಯಾಗಿದೆ. ಘಟನೆಯ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

- Advertisement -

Latest News

error: Content is protected !!