Monday, June 15, 2026
Homeಕರಾವಳಿಬೆಳ್ತಂಗಡಿ; ಭಾರೀ ಮಳೆಗೆ ಮನೆ ಮೇಲೆ ಗುಡ್ಡ ಕುಸಿತ

ಬೆಳ್ತಂಗಡಿ; ಭಾರೀ ಮಳೆಗೆ ಮನೆ ಮೇಲೆ ಗುಡ್ಡ ಕುಸಿತ

- Advertisement -
- Advertisement -

ಬೆಳ್ತಂಗಡಿ; ಭಾರೀ ಮಳೆಗೆ ಮನೆ ಮೇಲೆ ಗುಡ್ಡ ಕುಸಿತವಾಗಿರುವ ಘಟನೆ ಮುಂಡಾಜೆಯಲ್ಲಿ ನಡೆದಿದೆ.

ಮುಂಡಾಜೆ ಗ್ರಾಮದ ಪಿಲತ್ತಡ್ಕ ಎಂಬಲ್ಲಿ ವನದುರ್ಗಾ ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿರುವ ಶ್ರೀಧರ ಪೂಜಾರಿ ಎಂಬವರ ಮನೆಯ ಸಮೀಪದ ಗುಡ್ಡ ಮಳೆಗೆ ಮನೆ ಮೇಲೆ ಕುಸಿದಿದೆ.

ಮಣ್ಣು ಕುಸಿದು ರಸ್ತೆ ಸಂಪೂರ್ಣ ಮುಚ್ಚಿ ಹೋಗಿದ್ದು ಜನರ ಹಾಗೂ ವಾಹನಗಳ ಸಂಚಾರ ಅಸಾಧ್ಯವಾಗಿದೆ. ಮನೆಯ ಹಿಂಭಾಗದಲ್ಲಿಯೂ ಮಣ್ಣು ಬಿದ್ದಿದ್ದು ಅಪಾಯಕಾರಿ ಸ್ಥಿತಿಯಿದೆ. ಇದೀಗ ಸ್ಥಳೀಯ ಯುವಕರು ರಸ್ತೆಗೆ ಬಿದ್ದಿರುವ ಮಣ್ಣನ್ನು ತೆರವುಗೊಳಿಸಿದ್ದಾರೆ.

- Advertisement -

Latest News

error: Content is protected !!