Wednesday, June 3, 2026
Homeತಾಜಾ ಸುದ್ದಿಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ

- Advertisement -
- Advertisement -

ನವದೆಹಲಿ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಿಸಿದೆ. ಒಂದೇ ಹಂತದಲ್ಲಿ ಚುನಾವಣೆ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ.

ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಚುನಾವಣಾ ಆಯೋಗದ ಮುಖ್ಯ ಆಯುಕ್ತ  ರಾಜೀವ್ ಕುಮಾರ್, ಒಂದೇ ಹಂತದಲ್ಲಿ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಚುನಾವಣೆ ನಡೆಸಲಾಗುವುದಾಗಿ ತಿಳಿಸಿದರು.

ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ನವೆಂಬರ್.20ರಂದು ಮತದಾನ ನಡೆಯಲಿದೆ. ನವೆಂಬರ್ 23ಕ್ಕೆ ಮತಏಣಿಕೆ ನಡೆದು, ಫಲಿತಾಂಶ ಘೋಷಿಸಲಾಗುತ್ತದೆ ಎಂದರು.

ಹೀಗಿದೆ ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ದಿನಾಂಕ

ದಿನಾಂಕ 22-10-2024ರಂದುಅಧಿಸೂಚನೆ ಹೊರಡಿಸಲಾಗುತ್ತದೆ.

ದಿನಾಂಕ 29-10-2024ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನ

ದಿನಾಂಕ 30-10-2024ರಂದು ನಾಮಪತ್ರಗಳ ಪರಿಶೀಲನೆ

ದಿನಾಂಕ 04-11-2024 ನಾಮಪತ್ರ ಹಿಂಪಡೆಯಲು ಕೊನೆಯ ದಿನ

ದಿನಾಂಕ 20-11-2024ರಂದು ಮತದಾನ ನಡೆಯಲಿದೆ.

 ದಿನಾಂಕ 23-11-2024ರಂದು ಮತಏಣಿಕೆ ನಡೆದು, ಫಲಿತಾಂಶ ಘೋಷಣೆ

ದಿನಾಂಕ 25-11-2024ರಂದು ಚುನಾವಣಾ ಪ್ರಕ್ರಿಯೆ ಮುಕ್ತಾಯ

- Advertisement -

Latest News

error: Content is protected !!