- Advertisement -
![]()
- Advertisement -
ಬೆಂಗಳೂರು; ಖ್ಯಾತ ನಟಿ ಅಮೂಲ್ಯ ಅವರ ಸಹೋದರ ಹಾಗೂ ನಿರ್ದೇಶಕ ದೀಪಕ್ ಅರಸ್ ನಿಧನರಾಗಿದ್ದಾರೆ. ಕಿಡ್ನಿ ವೈಫಲ್ಯದಿಂದಾಗಿ ದೀಪಕ್ ಅರಸ್ ಅವರು ನಿನ್ನೆ ಸಂಜೆ ನಿಧನರಾಗಿದ್ದಾರೆ.
ದೀಪಕ್ ಅರಸ್ ಅವರಿಗೆ ಕಿಡ್ನಿ ವೈಫಲ್ಯ ಆಗಿತ್ತು. ಇದಕ್ಕಾಗಿ ಡಯಾಲಿಸಿಸ್ ಕೂಡ ಮಾಡಿಸುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿ ಆಗದೇ ಇಹಲೋಕ ತ್ಯಜಿಸಿದ್ದಾರೆ. ದೀಪಕ್ ಅರಸ್ ಅವರ ಸಾವಿನಿಂದಾಗಿ ಅಮೂಲ್ಯ ಅವರ ಕುಟುಂಬದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.
ಸ್ಯಾಂಡಲ್‌ವುಡ್‌ನಲ್ಲಿ ಅಮೂಲ್ಯ ಬಾಲನಟಿ, ನಾಯಕಿಯಾಗಿ ಜನಪ್ರಿಯತೆ ಪಡೆದಿದ್ದರೆ, ಅವರ ಸಹೋದರ ದೀಪಕ್ ಅರಸ್ ಡೈರೆಕ್ಟರ್ ಕ್ಯಾಪ್ ತೊಟ್ಟು ನಿರ್ದೇಶಕರಾಗಿ ಗುರುತಿಸಿಕೊಂಡಿದ್ದರು. ಕನ್ನಡದ ‘ಮನಸಾಲಜಿ’, ‘ಶುಗರ್ ಫ್ಯಾಕ್ಟರಿ’ ಸಿನಿಮಾಗಳಿಗೆ ದೀಪಕ್ ಅರಸ್ ಆಕ್ಷನ್ ಕಟ್ ಹೇಳಿದ್ದರು
- Advertisement -


