Wednesday, June 3, 2026
Homeತಾಜಾ ಸುದ್ದಿಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ; ಸಿ.ಪಿ ಯೋಗೇಶ್ವರ್ ಘೋಷಣೆ

ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ; ಸಿ.ಪಿ ಯೋಗೇಶ್ವರ್ ಘೋಷಣೆ

- Advertisement -
- Advertisement -

ಹುಬ್ಬಳ್ಳಿ: ಚನ್ನಪಟ್ಟಣ ವಿಧಾನಸಭಾ ಬೈ ಎಲೆಕ್ಷನ್ ನಲ್ಲಿ ನಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂಬುದಾಗಿ ಸಿ.ಪಿ ಯೋಗೇಶ್ವರ್ ಅವರು ಘೋಷಿಸಿದ್ದಾರೆ.

ಇಂದು ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ನಿವಾಸಕ್ಕೆ ಭೇಟಿ ನೀಡಿದ ಅವರು, ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ಸಲ್ಲಿಸಿದರು.ಈ ಮೂಲಕ ಬಿಜೆಪಿಯಿಂದ ವಿಧಾನಪರಿಷತ್ತಿಗೆ ನಾಮನಿರ್ದೇಶನಗೊಂಡಿದ್ದಂತ ಸಿ.ಪಿ ಯೋಗೇಶ್ವರ್ ಅವರು, ತಮ್ಮ ಎಂಎಲ್ಸಿ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದರು.

ಈ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾನು ವಿಧಾನ ಪರಿಷತ್ ಸದಸ್ಯ ಸ್ಥಆನಕ್ಕೆ ರಾಜೀನಾಮೆ ನೀಡಿದ್ದೇನೆ. ಈಗ ನಾನು ಚನ್ನಪಟ್ಟಣ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದೇನೆ ಎಂಬುದಾಗಿ ತಿಳಿಸಿದರು.

- Advertisement -

Latest News

error: Content is protected !!