ನವದೆಹಲಿ: ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರವು ಕೋಮು ಘರ್ಷಣೆಗೆ ಸಂಬಂಧಿಸಿದಂತೆ ಆರೋಪಿಗಳ ಮನೆಗಳನ್ನು ಜೆಸಿಬಿ ಮೂಲಕ ಧ್ವಂಸಗೊಳಿಸುವ ನಿರ್ಧಾರದ ಕುರಿತಂತೆ ವಿರುದ್ಧ ಸುಪ್ರೀಂಕೋರ್ಟ್ ಅ.22 ಮಂಗಳವಾರದಂದು ಪರೋಕ್ಷ ಎಚ್ಚರಿಕೆಯ ಸಂದೇಶ ನೀಡಿದೆ.
ಸುಪ್ರೀಂಕೋರ್ಟ್ ಆರೋಪಿಯ ಮನೆಯನ್ನು ಒಡೆಯುವ ನೋಟಿಸ್ ಅನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದು, ಇದು ರಾಜ್ಯ ಸರ್ಕಾರದ ಆಯ್ಕೆಗೆ ಬಿಟ್ಟ ವಿಚಾರವಾಗಿದೆ. ಒಂದು ವೇಳೆ ನ್ಯಾಯಾಲಯದ ನಿರ್ದೇಶನವನ್ನು ಉಲ್ಲಂಘಿಸಲು ಬಯಸುವುದಾದರೆ ಆಯ್ಕೆ ನಿಮ್ಮ ಸರ್ಕಾರದು ಎಂದು ಎಚ್ಚರಿಕೆ ನೀಡಿದೆ. ಇನ್ನು ಈ ಕುರಿತಂತೆ ಹೆಚ್ಚಿನ ವಿಚಾರಣೆಯನ್ನು ಸುಪ್ರೀಂಕೋರ್ಟ್ ಪೀಠದ ಜಸ್ಟೀಸ್ ಬಿ.ಆರ್.ಗವಾಯಿ ಮತ್ತು ಜಸ್ಟೀಸ್ ಕೆವಿ ವಿಶ್ವನಾಥನ್ ಅವರನ್ನೊಳಗೊಂಡ ಅ.23 ಬುಧವಾರದಂದು ಮುಂದೂಡಿದ್ದು, ಉತ್ತರಪ್ರದೇಶ ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳದಂತೆ ತಡೆ ನೀಡಿರುವುದಾಗಿ ತಿಳಿಸಿದೆ.
ಇನ್ನು ಬಹ್ರೈಚ್ ನಲ್ಲಿ ಅಕ್ಟೋಬರ್ 13ರಂದು ನಡೆದಿದ್ದ ಗಲಭೆಯಲ್ಲಿ ಶಾಮೀಲಾಗಿದ್ದ ಆರೋಪಿಗಳ ಮನೆಗಳ ಬಗ್ಗೆ ನಾಳೆಯ ವಿಚಾರಣೆಯವರೆಗೂ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಉತ್ತರ ಪ್ರದೇಶ ಸರ್ಕಾರದ ಪರ ವಕೀಲರು ಸುಪ್ರೀಂಗೆ ತಿಳಿಸಿದ್ದಾರೆ ಎಂದು ಎಎನ್ ಐ ವರದಿ ತಿಳಿಸಿದೆ.


