- Advertisement -
![]()
- Advertisement -
ಬೆಂಗಳೂರು ನಗರ ಜಿಲ್ಲೆಯ ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಮತ್ತು ಅಂಗನವಾಡಿ ಕೇಂದ್ರಗಳಿಗೆ ಭಾರಿ ಮಳೆ ಮುನ್ಸೂಚನೆಯ ಹಿನ್ನೆಲೆಯಲ್ಲಿ ನಾಳೆ ಬುಧವಾರದಂದು ರಜೆಯನ್ನು ಜಿಲ್ಲಾಧಿಕಾರಿ ಜಗದೀಶ್ ಅವರು ಘೋಷಿಸಿದ್ದಾರೆ.
ನಿರಂತರವಾಗಿ ನಗರ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಆದರೆ, ಎಲ್ಲ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಎಂಜಿನಿಯರಿಂಗ್, ಐಟಿಐ ಕಾಲೇಜುಗಳಿಗೆ ರಜೆ ಇರುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಇನ್ನು ಮಳೆಯ ಕಾರಣದಿಂದಾಗಿ ಈಗ ನೀಡಿರುವ ರಜೆಯಿಂದ ಉಂಟಾಗಿರುವ ಕಲಿಕಾ ಸಮಯದ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿ ನಡೆಸುವ ಮೂಲಕ ಸರಿದೂಗಿಸುವಂತೆ ಆದೇಶದಲ್ಲಿ ಸೂಚಿಸಿದ್ದಾರೆ.
- Advertisement -


