Saturday, June 6, 2026
Homeಕರಾವಳಿಮಂಗಳೂರುಮಂಗಳೂರು; ಅ.24 ರಂದು ವಿಧಾನ ಪರಿಷತ್ ಉಪಚುನಾವಣೆ 2024ರ ಮತ ಎಣಿಕೆ; ನಿಷೇಧಾಜ್ಞೆ ವಿಧಿಸಿ ಜಿಲ್ಲಾಧಿಕಾರಿ...

ಮಂಗಳೂರು; ಅ.24 ರಂದು ವಿಧಾನ ಪರಿಷತ್ ಉಪಚುನಾವಣೆ 2024ರ ಮತ ಎಣಿಕೆ; ನಿಷೇಧಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ

- Advertisement -
- Advertisement -

ಮಂಗಳೂರು; ಅ.24 ರಂದು ವಿಧಾನ ಪರಿಷತ್ ಉಪಚುನಾವಣೆ 2024ರ ಮತ ಎಣಿಕೆ ಕಾರ್ಯ ನಡೆಯಲಿದೆ. ಹೀಗಾಗಿ ಸಂತ ಅಲೋಶಿಯಸ್ ಪದವಿಪೂರ್ವ ಕಾಲೇಜಿನ ಸುತ್ತ 500 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಧಿಸಿ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಆದೇಶಿಸಿದ್ದಾರೆ.

ಮತ ಎಣಿಕೆ ಕಾರ್ಯವು ಸುಸೂತ್ರವಾಗಿ ನಡೆಯಲು ಹಾಗೂ ಕಾನೂನು ವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಕ್ಟೋಬರ್ 24ರಂದು ಬೆಳಿಗ್ಗೆ 5 ಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಸಂತ ಅಲೋಶಿಯಸ್ ಪದವಿಪೂರ್ವ ಕಾಲೇಜಿನ ಸುತ್ತ 500 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ.

- Advertisement -

Latest News

error: Content is protected !!