- Advertisement -
- Advertisement -
ಬಂಟ್ವಾಳದ ಯುವಕನೊಬ್ಬ ಸುರತ್ಕಲ್ ನಲ್ಲಿ ಸಮುದ್ರ ಪಾಲಾಗಿದ್ದಾನೆ. ಬಂಟ್ವಾಳ ತಾಲೂಕಿನ ಬಿಸಿ ರೋಡ್ ನಿವಾಸಿ ಪ್ರಜ್ವಲ್ (21) ಸಮುದ್ರ ಪಾಲಾದ ಯುವಕ.
ಪ್ರಜ್ವಲ್ ಸುಮಾರು 8 ಮಂದಿ ಸ್ನೇಹಿತರ ಜೊತೆ ಇಂದು ಸಂಜೆ ಮುಕ್ಕ ರೆಡ್ ರಾಕ್ ಬಳಿಯ ಸಮುದ್ರ ಕಿನಾರೆಯಲ್ಲಿ ಮಂಗಳವವಾರ ಸಂಜೆ ಆಟವಾಡುತ್ತಿದ್ದರು . ಈ ವೇಳೆ ಸಮುದ್ರದ ಅಲೆಗೆ ಸಿಲುಕಿ ಪ್ರಜ್ವಲ್ ಸಮುದ್ರ ಪಾಲಾಗಿದ್ದಾರೆ. ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆಗೆ ಸಂಬಂಧಿಸಿ ಯುವಕನ ಸಂಬಂಧಿಕರು ಸುರತ್ಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ
- Advertisement -