Saturday, June 13, 2026
Homeಅಪರಾಧಉಡುಪಿ ನ್ಯಾಯಾಲಯದಿಂದ ಅಕ್ರಮ ಬಾಂಗ್ಲಾ ವಲಸಿಗರ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಉಡುಪಿ ನ್ಯಾಯಾಲಯದಿಂದ ಅಕ್ರಮ ಬಾಂಗ್ಲಾ ವಲಸಿಗರ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

- Advertisement -
- Advertisement -

ಉಡುಪಿ: 10 ಮಂದಿ ಬಾಂಗ್ಲಾ ವಲಸಿಗರು ಜಿಲ್ಲೆಯಲ್ಲಿ ಅಕ್ರಮವಾಗಿ ನೆಲೆಸಿರುವ ಪ್ರಕರಣದ ನ್ಯಾಯಾಂಗ ಬಂಧನ ಅವಧಿಯನ್ನು ಇದೀಗ ಉಡುಪಿ ನ್ಯಾಯಾಲಯ ಮತ್ತೆ 14 ದಿನಗಳ ಕಾಲ ವಿಸ್ತರಿಸಿ ಎಂದು ಬುಧವಾರ ಆದೇಶಿಸಿದೆ.

10 ಮಂದಿ ಆರೋಪಿಗಳನ್ನು ಉಡುಪಿಯ ಹೂಡೆ, ಸಂತೆಕಟ್ಟೆ, ಕಾರ್ಕಳದ ಮಾಳದಲ್ಲಿ ಬಂಧಿಸಲಾಗಿದ್ದು, ಇವರನ್ನು ಹಿರಿಯಡ್ಕದಲ್ಲಿರುವ ಜಿಲ್ಲಾ ಕಾರಾಗೃಹದಿಂದ ವೀಡಿಯೋ ಕಾನ್ಫರೆನ್ಸ್‌ ಮೂಲಕ ಉಡುಪಿಯ ಪ್ರಧಾನ ಎರಡನೇ ಸಿವಿಲ್‌ ನ್ಯಾಯಾಧೀಶರು ಮತ್ತು ಸಿಜೆಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಧೀಶ ಯೋಗೀಶ್‌ ಅವರು ಎಲ್ಲ 10 ಮಂದಿ ಆರೋಪಿಗಳಿಗೆ ನ.15ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದರು.

ಆರೋಪಿಗಳ ಪರ ವಕೀಲ ಅಸಾದುಲ್ಲಾ ಕಟಪಾಡಿ ಬಂಧಿತ 10 ಮಂದಿ ಆರೋಪಿಗಳಿಗೆ ಜಾಮೀನು ನೀಡುವಂತೆ ಕೋರಿ ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯ ವಾದ ಪ್ರತಿವಾದ ನಡೆದ ಬಳಿಕ ಅಂತಿಮ ಆದೇಶವನ್ನು ನ.5ಕ್ಕೆ ನಿಗದಿ ಪಡಿಸಿ ನ್ಯಾಯಾಲಯ ಆದೇಶ ನೀಡಿದೆ.

- Advertisement -

Latest News

error: Content is protected !!