- Advertisement -
![]()
- Advertisement -
ಕಡಬ: ಯುವಕನೋರ್ವ ಅನಾರೋಗ್ಯದ ಹಿನ್ನೆಲೆ ಶಸ್ತ್ರಚಿಕಿತ್ಸೆ ಪಡೆಯುತ್ತಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನ.2ರ ಶನಿವಾರದಂದು ನಡೆದಿದೆ.
ಮೃತಪಟ್ಟ ಯುವಕ ಕಡಬ ತಾಲೂಕಿನ ಕರ್ಮಾಯಿ ನಿವಾಸಿ ಜಾರ್ಜ್ ಎಂಬವರ ಪುತ್ರ ಜೈಸನ್ ಜಾರ್ಜ್ (29) ಎನ್ನಲಾಗಿದೆ.
ಜೈಸನ್ ಜಾರ್ಜ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಇವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರದಂದು ಶಸ್ತ್ರಚಿಕಿತ್ಸೆ ನಡೆಯುತ್ತಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
- Advertisement -


