- Advertisement -
![]()
- Advertisement -
ಸುಬ್ರಮಣ್ಯ : ಗುತ್ತಿಗಾರಿನ ಎಲಿಮಲೆಯಲ್ಲಿ ಅನ್ಯಕೋಮಿನ ಯುವಕನೋರ್ವ ವಿದ್ಯಾರ್ಥಿನಿಗೆ ಮೆಸೇಜ್ ಮಾಡಿದ್ದಾನೆ ಎಂದು ಆರೋಪಿಸಿ ತಂಡವೊಂದು ಹಲ್ಲೆ ಮಾಡಿದ ಘಟನೆ ವರದಿಯಾಗಿದೆ.
ಘಟನೆಯಲ್ಲಿ ಥಳಿತಕ್ಕೊಳಗಾದ ನಿಯಾಝ್ ಎನ್ನುವ ಯುವಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿದುಬಂದಿದೆ.
ಈತ ಸ್ಥಳೀಯ ಯುವತಿಯೋರ್ವಳಿಗೆ ಮೆಸೇಜ್ ಮಾಡುತ್ತಿರುವುದಾಗಿ ತಿಳಿದುಬಂದಿದ್ದು, ಈತನನ್ನು ಕರೆಸಿಕೊಂಡ ಯುವಕರ ತಂಡವೊಂದು ಹಲ್ಲೆ ನಡೆಸಿರುವುದಾಗಿ ಹೇಳಲಾಗಿದೆ.
ಈ ಕುರಿತಂತೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದಾಗಿ ತಿಳಿದುಬಂದಿದೆ.
- Advertisement -


