Monday, June 8, 2026
Homeಕರಾವಳಿಮಂಗಳೂರುವಕ್ಪ್ ಆಸ್ತಿ ನೋಂದಣಿ ವಿಚಾರ: ಮಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ

ವಕ್ಪ್ ಆಸ್ತಿ ನೋಂದಣಿ ವಿಚಾರ: ಮಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ

- Advertisement -
- Advertisement -

ಮಂಗಳೂರು: ರಾಜ್ಯದಲ್ಲಿ ವಕ್ಫ್ ಆಸ್ತಿ ನೋಂದಣಿ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಮಂಗಳೂರಿನಲ್ಲಿ ಇಂದು ಪ್ರತಿಭಟನೆ ನಡೆಯಿತು.

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ಡಾ. ವೈ. ಭರತ್ ಶೆಟ್ಟಿ ಮತ್ತು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಭಾಗವಹಿಸಿದ್ದರು.

ಮಂಗಳೂರು ತಾಲೂಕು ಆಡಳಿತ ಸೌಧದ ಮುಂಭಾಗ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ಬಳಿಕ ಸಂಸದರ ನೇತೃತ್ವದಲ್ಲಿ ತಹಶೀಲ್ದಾರ್ ಗೆ ಮನವಿ ಸಲ್ಲಿಸಿದರು.

ವಕ್ಫ್ ಆಸ್ತಿ ನೋಂದಣಿ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ಇಂದು ಎಲ್ಲಾ ತಾಲೂಕು ಕಚೇರಿಗಳ ಎದುರು ಪ್ರತಿಭಟನೆ ನಡೆಸಿತ್ತು.

- Advertisement -

Latest News

error: Content is protected !!