ಕಾಸರಗೋಡು: ಇಲ್ಲಿನ ನೀಲೇಶ್ವರ ವಿರಾರ್ ಕಾವ್ ದೈವಸ್ಥಾನದ ಕಳಿ ಯಾಟ ಮಹೋತ್ಸವದ ಸಂದರ್ಭದಲ್ಲಿ ನಡೆದ ಸುಡುಮದ್ದು ಸ್ಫೋಟದಲ್ಲಿ ಹಲವರು ಗಾಯಗೊಂಡು ಸಾವನ್ನಪ್ಪಿದ ಘಟನೆ ನಡೆದಿದ್ದು, ಇದೀಗ ದುರಂತದಲ್ಲಿ ಗಾಯಗೊಂಡು ಸಾವನ್ನಪ್ಪಿದವರ ಸಂಖ್ಯೆ 4ಕ್ಕೆ ಏರಿದೆ ಎನ್ನಲಾಗಿದೆ.
ಘಟನೆಯಲ್ಲಿ ಗಾಯಗೊಂಡು ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೇರಿದ್ದು, ಭಾನುವಾರದಂದು ಕಿನಾವೂರಿನ ಯು. ರತೀಶ್ (40), ಕೊಲ್ಲಂಪಾರೆಯ ಆಟೋ ಚಾಲಕ ಕೆ. ಬಿಜು (37), ಚೆರ್ವತ್ತೂರು ತುರುತ್ತಿಯ ಶೋಬಿನ್ ರಾಜ್ (19), ಕಿನಾವೂರಿನ ಸಂದೀಪ್ (38) ಎನ್ನಲಾಗಿದೆ.
ರತೀಶ್, ಬಿಜು, ಶೋಬಿನ್ ರಾಜ್ ಕೋಜಿಕ್ಕೋಡ್ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟರು. ಶೋಬಿನ್ ರಾಜ್ ಚೆನ್ನೈ ಯಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಆಗಿ ಕೆಲಸ ಮಾಡುತ್ತಿದ್ದರು.
ಕಳೆದ ಸೋಮವಾರ ರಾತ್ರಿ ಈ ಘಟನೆ ನಡೆದಿದ್ದು, ಸ್ಫೋಟದಲ್ಲಿ 154 ಮಂದಿ ಗಾಯ ಗೊಂಡಿದ್ದರು. ಈ ಪೈಕಿ 8 ಮಂದಿ ಗಂಭೀರ ಸುಟ್ಟ ಗಾಯ ಗೊಂಡಿದ್ದರು. ಗಾಯಗೊಂಡ 90 ಕ್ಕೂ ಅಧಿಕ ಮಂದಿ ಈಗಲೂ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


