Wednesday, June 3, 2026
Homeಅಪರಾಧಹಾಸನ ಪೆನ್ ಡ್ರೈವ್ ಪ್ರಕರಣ; ಸಂಸದ ಪ್ರಜ್ವಲ್‌ ರೇವಣ್ಣ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಹಾಸನ ಪೆನ್ ಡ್ರೈವ್ ಪ್ರಕರಣ; ಸಂಸದ ಪ್ರಜ್ವಲ್‌ ರೇವಣ್ಣ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

- Advertisement -
- Advertisement -

ಹಾಸನ ಪೆನ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರು  ಸುಪ್ರೀಂ ಕೋರ್ಟ್‌ ಗೆ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದೆ.

ಪ್ರಜ್ವಲ್ ರೇವಣ್ಣ ಅವರು ಅತ್ಯಾಚಾರ ಪ್ರಕರಣದಲ್ಲಿ ಹೈಕೋರ್ಟ್ ಜಾಮೀನು ನಿರಾಕರಿಸಿದ್ದನ್ನು ಪ್ರಶ್ನಿಸಿ, ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು.

ಆದರೆ ಅವರ ಜಾಮೀನು ಅರ್ಜಿಯನ್ನು ನ್ಯಾ. ದೇಲಾ ಎಂ. ತ್ರಿವೇದಿ ಹಾಗೂ ನ್ಯಾ. ಸತೀಶ್‌ ಚಂದ್ರ ಶರ್ಮಾ ಅವರಿದ್ದ ಪೀಠವು, ಪ್ರಜ್ವಲ್‌ ಅತ್ಯಂತ ಪ್ರಭಾವಿ ಎಂಬುದನ್ನು ಪರಿಗಣಿಸಿ ತಿರಸ್ಕರಿಸಿದೆ. ಹಾಗೆಯೇ ಸುಪ್ರೀಂ ಕೋರ್ಟ್‌ ಪೀಠ, ಕರ್ನಾಟಕ ಹೈಕೋರ್ಟ್‌ ಜಾಮೀನು ನಿರಾಕರಿಸಿ ಅಕ್ಟೋಬರ್‌ 21ರಂದು ನೀಡಿರುವ ಆದೇಶದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ತಿಳಿಸಿದೆ.   

ಇನ್ನು ಸಂಸದ ಪ್ರಜ್ವಲ್ ಪರ ವಾದವನ್ನು ಮಂಡಿಸಿದ ಮುಕುಲ್‌ ರೋಹಟಗಿ, “ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿಂತೆ ಆರೋಪ ಪಟ್ಟಿ ಸಲ್ಲಿಕೆಯಾಗಿದೆ. ಐಪಿಸಿಯ ಸೆಕ್ಷನ್‌ 376ರ ಉಲ್ಲೇಖ ಪ್ರಜ್ವಲ್‌ ವಿರುದ್ಧ ಸಲ್ಲಿಕೆಯಾಗಿರುವ ಆರಂಭಿಕ ದೂರಿನಲ್ಲಿ ಇಲ್ಲ ಎಂದು ಕೋರ್ಟ್‌ಗೆ,” ಹೇಳಿದರು.

- Advertisement -

Latest News

error: Content is protected !!