Thursday, June 4, 2026
Homeಕರಾವಳಿಮಂಗಳೂರುಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ಶ್ರೀ ಕಂಚಿ ಕಾಮಕೋಟಿ ಪೀಠಾಧಿಪತಿ ಭೇಟಿ

ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ಶ್ರೀ ಕಂಚಿ ಕಾಮಕೋಟಿ ಪೀಠಾಧಿಪತಿ ಭೇಟಿ

- Advertisement -
- Advertisement -

ಸುಬ್ರಮಣ್ಯ; ಕಂಚಿ ಕಾಮಕೋಟಿ ಪೀಠಾಧಿಪತಿ ಜಗದ್ಗುರು ಪೂಜ್ಯ ಶ್ರೀ ಶಂಕರ ವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಮಹಾಸ್ವಾಮೀಜಿಯವರು ನವೆಂಬರ್ 13 ಮಂಗಳವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ  ದೇವಾಲಯಕ್ಕೆ ಭೇಟಿ ನೀಡಿದರು.

ಶ್ರೀಗಳನ್ನು ದೇವಸ್ಥಾನದ ವತಿಯಿಂದ ದೇಗುಲದ ಆನೆ ಯಶಸ್ವಿ ಉಪಸ್ಥಿತಿಯಲ್ಲಿ ಬ್ಯಾಂಡ್‌, ವಾಲಗದೊಂದಿಗೆ ಸ್ವಾಗತಿಸಲಾಯಿತು. ಕಾಶಿಕಟ್ಟೆಯಿಂದ ಮೆರವಣಿಗೆಯಲ್ಲಿ ದೇವಸ್ಥಾನದವರೆಗೆ ಕರೆತರಲಾಯಿತು. ದೇಗುಲದ ರಾಜಗೋಪುರದ ಬಳಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಸ್ವಾಮೀಜಿಯವರನ್ನು ಸ್ವಾಗತಿಸಿದರು. ಸ್ವಾಮೀಜಿ ದೇವಾಲಯದಲ್ಲಿನ ದರ್ಪಣ ತೀರ್ಥ ನದಿಗೆ ತೆರಳಿ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ದೇವಸ್ಥಾನದ ಅಧಿಕಾರಿಗಳು, ಸಿಬ್ಬಂದಿ ಮತ್ತಿತರರು ಉಪಸ್ಥಿತರಿದ್ದರು.

- Advertisement -

Latest News

error: Content is protected !!