- Advertisement -
![]()
- Advertisement -
ಮಂಗಳೂರು : ನಿಲ್ಲಿಸಿದ್ದ ಕಾರು ಬೆಂಕಿಗಾಹುತಿಯಾಗಿರುವ ಘಟನೆ ಕದ್ರಿ ಪೊಲೀಸ್ ಠಾಣೆ ಮುಂಭಾಗ ಯುದ್ದ ಸ್ಮಾರಕದ ಬಳಿ ನಡೆದಿದೆ.
ಕಾರನ್ನು ಸ್ಮಾರಕದ ಸಮೀಪ ಪಾರ್ಕ್ ಮಾಡಲಾಗಿತ್ತು. ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದೆ.ಈ ವೇಳೆ ಕಾರಿನಲ್ಲಿ ಯಾರೂ ಇರಲಿಲ್ಲ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. 2.40 ಲಕ್ಷ ಕೊಟ್ಟು ಇವತ್ತಷ್ಟೆ ಕಾರು ಖರೀದಿ ಮಾಡಿದ್ದರು ಎನ್ನಲಾಗಿದೆ.ಅಗ್ನಿಶಾಮಕದಳ, ಸ್ಥಳಿಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದೆ.
- Advertisement -


