ಮಂಗಳೂರು: ರಾಜ್ಯದಲ್ಲಿ ಒಂದೇ ಒಂದು ಎಪಿಎಲ್ ಕಾರ್ಡ್ ರದ್ದು ಆಗಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ.
ರಾಜ್ಯದಲ್ಲಿ ಹನ್ನೊಂದು ಲಕ್ಷ ಪಡಿತರ ಚೀಟಿ ರದ್ದಾಗಿದೆ ಎಂಬ ಕಾರ್ಕಳ ಶಾಸಕ ಸುನೀಲ್ ಕುಮಾರ್ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವ ಮುನಿಯಪ್ಪ, ರಾಜ್ಯದಲ್ಲಿ 6.50 ಕೋಟಿ ಜನ ಇದ್ದರೂ 4.50 ಕೋಟಿ ಜನರಿಗೆ ಕಾರ್ಡ್ ಕೊಟ್ಟಿದ್ದೇವೆ, ಅರ್ಹರಲ್ಲದವರು ಜಾಸ್ತಿ ಜನ ಇದ್ದಾರೆ ಎಂಬ ಭಾವನೆ ಬಂದಿದೆ, ಹಾಗಾಗಿ ಪರಿಷ್ಕರಣೆಗೆ ನಿಯಾಮಾವಳಿ ಹಾಕಿಕೊಂಡಿದ್ದೇವೆ, ಈ ಹಿಂದಿನ ಸರ್ಕಾರವೇ ಈ ನಿಯಮ ಮಾಡಿದೆ ಎಂದು ತಿಳಿಸಿದ್ದಾರೆ.
ದಕ್ಷಿಣ ಭಾರತದಲ್ಲಿ ಅತೀ ಹೆಚ್ಚು ಕರ್ನಾಟಕದಲ್ಲಿ ಕಾರ್ಡ್ ಇದ್ದು, ಪರಿಷ್ಕರಣೆ ಮಾಡಿದಾಗ ಬಿಪಿಎಲ್ ಅಲ್ಲದೇ ಇರುವವರನ್ನು ಎಪಿಎಲ್ ಮಾಡಿದ್ದೇವೆ ಮತ್ತು ಎಪಿಎಲ್ ಗೆ ಸೇರ್ಪಡೆ ಮಾಡಿದವರನ್ನು ರದ್ದು ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪಡಿತರ ಚೀಟಿ ಪರಿಷ್ಕರಣೆ ಮಾಡುವಾಗ ಅರ್ಹರಿಗೆ ಬಿಪಿಎಲ್ ಕಾರ್ಡ್ ಕೊಡುತ್ತೇವೆ, ಶಾಸಕ ಸುನೀಲ್ ಕುಮಾರ್ ಅವರಿಗೆ ಮನವರಿಕೆ ಮಾಡುತ್ತೇವೆ, ನನ್ನ ಬಳಿ ಕೇಳಿದರೆ ಹೇಳುತ್ತೇನೆ ಎಂದೂ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ.


