Saturday, October 17, 2026
Homeಕರಾವಳಿಮಂಗಳೂರುಬಂಟ್ವಾಳ: ಸಿಡಿಲು ಬಡಿದು ಮನೆಯಂಗಳದಲ್ಲಿ ನಿಂತಿದ್ದ ಬಾಲಕ ಸಾವು

ಬಂಟ್ವಾಳ: ಸಿಡಿಲು ಬಡಿದು ಮನೆಯಂಗಳದಲ್ಲಿ ನಿಂತಿದ್ದ ಬಾಲಕ ಸಾವು

- Advertisement -
- Advertisement -

ಬಂಟ್ವಾಳ: ಸಿಡಿಲು ಬಡಿದು ಬಾಲಕನೋರ್ವ ಸಾವನ್ನಪ್ಪಿರುವ ದುರ್ಘಟನೆ ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದಲ್ಲಿ ಸಂಭವಿಸಿದೆ.ಕೆದಿಲ ಗ್ರಾಮದ ಗಡಿಯಾರ ನಿವಾಸಿ ಸುಭೋದ್ (14) ಎಂಬಾತ ಮೃತಪಟ್ಟ ಬಾಲಕನಾಗಿದ್ದಾನೆ.

ನಿನ್ನೆ ಸಂಜೆ ಮೃತ ಸುಭೋಧ್ ತನ್ನ ಮನೆಯ ಅಂಗಳದಲ್ಲಿ ನಿಂತಿದ್ದ ವೇಳೆ ಸಿಡಿಲಿನ ಆಘಾತವಾಗಿತ್ತು. ತಕ್ಷಣವೇ ಬಾಲಕನನ್ನು ಚಿಕಿತ್ಸೆಗಾಗಿ ಪುತ್ತೂರಿನ‌ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು.ಆದರೆ ಆಸ್ಪತ್ರೆಗೆ ದಾಖಲಿಸುವ ಮುನ್ನವೇ ಬಾಲಕ ಸುಭೋದ್ ಮೃತಪಟ್ಟಿದ್ದ ಎಂದು ತಿಳಿದುಬಂದಿದೆ.

- Advertisement -

Latest News

error: Content is protected !!