Saturday, June 13, 2026
Homeಕರಾವಳಿಉಡುಪಿಉಡುಪಿ; ನೀರಿನ ಡ್ರಮ್ ಒಳಗೆ ಅನುಮಾನಾಸ್ಪದ ರೀತಿಯಲ್ಲಿ ಬಸ್ ಡ್ರೈವರ್ ಶವ ಪತ್ತೆ

ಉಡುಪಿ; ನೀರಿನ ಡ್ರಮ್ ಒಳಗೆ ಅನುಮಾನಾಸ್ಪದ ರೀತಿಯಲ್ಲಿ ಬಸ್ ಡ್ರೈವರ್ ಶವ ಪತ್ತೆ

- Advertisement -
- Advertisement -

ಉಡುಪಿ; ನೀರಿನ ಡ್ರಮ್ ಒಳಗೆ ಅನುಮಾನಾಸ್ಪದ ರೀತಿಯಲ್ಲಿ ಬಸ್ ಡ್ರೈವರ್ ಶವ ಪತ್ತೆಯಾಗಿರುವ ಘಟನೆ ಕೊಡವೂರು ಗ್ರಾಮದ ಪಾಳೆಕಟ್ಟೆ ಒಂದನೇ ಕ್ರಾಸ್‌ನಲ್ಲಿ ನಡೆದಿದೆ. ಪಾಳೆಕಟ್ಟೆ ನಿವಾಸಿ ಪ್ರಸಾದ್‌ (40) ಮೃತ ವ್ಯಕ್ತಿ.

ನೀರು ತುಂಬಿಸಿಟ್ಟಿದ್ದ ಪ್ಲಾಸ್ಟಿಕ್ ಡ್ರಮ್‌ನೊಳಗೆ ಪ್ರಸಾದ್ ಮೃತದೇಹ ಪತ್ತೆಯಾಗಿದೆ. ವಿಪರೀತ ಮದ್ಯಪಾನ ಮಾಡುವ ಚಟ ಹೊಂದಿದ್ದ ಇವರು, ಸಿಟಿ ಬಸ್ ಚಾಲಕರಾಗಿದ್ದರು. ಅಲ್ಲದೇ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಪ್ರಸಾದ್ ಮನೆಯ ಬಳಿ ಇದ್ದ ನೀರು ತುಂಬಿಸಿಟ್ಟಿದ್ದ ಪ್ಲಾಸ್ಟಿಕ್ ಡ್ರಮ್‌ನ ಒಳಗೆ ಸೊಂಟದಿಂದ ಮೇಲ್ಭಾಗ ದಿಂದ ಹೊರಗೆ ಚಾಚಿಕೊಂಡು ಮೇಲ್ಮುಖವಾಗಿ ಮೃತಪಟ್ಟ ರೀತಿಯಲ್ಲಿ ಪತ್ತೆಯಾಗಿದ್ದಾರೆ. ಮೃತರ ಕುತ್ತಿಗೆ, ಮುಖ ಭಾಗದಿಂದ ರಕ್ತ ಬರುತ್ತಿದ್ದು, ಮುಖ ಊದಿ ಕೊಂಡಿದೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 ಪ್ರಸಾದ್ ಸಾವು ಹಲವು ಸಂಶಯಕ್ಕೆ ಎಡೆಮಾಡಿದ್ದು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ತಕ್ಷಣ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಮಿತಿ ಸದಸ್ಯ ಜಯನ್ ಮಲ್ಪೆ ಆಗ್ರಹಿಸಿದ್ದಾರೆ.

- Advertisement -

Latest News

error: Content is protected !!