- Advertisement -
![]()
- Advertisement -
ಉತ್ತರಕನ್ನಡ : ಕ್ಲಿನಿಕ್ ಒಂದು ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಘಟನೆ ಕಾರವಾರ ತಾಲೂಕಿನ ಚಾರುಮತಿ ವುಮೆನ್ ವೆಲ್ತ್ ಕ್ಲಿನಿಕ್ ನಲ್ಲಿ ನಡೆದಿದೆ.
ಮಧ್ಯಾಹ್ನದ ನಂತರ ಕ್ಲಿನಿಕ್ ಅನ್ನು ಮುಚ್ಚಲಾಗಿತ್ತು. ಈ ವೇಳೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕ್ಲಿನಿಕ್ ನಲ್ಲಿದ್ದ ಎಸಿ, ರೆಫ್ರಿಜರೇಟರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಕೂಡಲೇ ಸ್ಥಳೀಯರು ಗಮನಿಸಿದ್ದಾರೆ ತಕ್ಷಣ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಕ್ಲಿನಿಕ್ ನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಕರೆಕಲಾಗಿವೆ.ಘಟನೆ ಕುರಿತಂತೆ ಕಾರವಾರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -


