Thursday, June 4, 2026
Homeಕರಾವಳಿಉಡುಪಿಉಡುಪಿ ; ಇನ್ನೋವಾ ಕಾರಿಗೆ ಹಿಂದಿನಿಂದ ಟ್ಯಾಂಕರ್ ಢಿಕ್ಕಿ: ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯ

ಉಡುಪಿ ; ಇನ್ನೋವಾ ಕಾರಿಗೆ ಹಿಂದಿನಿಂದ ಟ್ಯಾಂಕರ್ ಢಿಕ್ಕಿ: ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯ

- Advertisement -
- Advertisement -

ಉಡುಪಿ ; ಇನ್ನೋವಾ ಕಾರಿಗೆ ಹಿಂದಿನಿಂದ ಟ್ಯಾಂಕರ್ ಢಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕುಂಭಾಶಿಯಲ್ಲಿ ನಡೆದಿದೆ.

ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಮುಗಿಸಿ ಕೇರಳ ಕಡೆಗೆ ಸಾಗುತ್ತಿದ್ದ ಕಾರಿಗೆ ಹಿಂದಿನಿಂದ ಟ್ಯಾಂಕರ್ ಢಿಕ್ಕಿಯಾಗಿದೆ. ಗಾಯಗೊಂಡ ಇಬ್ಬರನ್ನು ಕೋಟೇಶ್ವರ ಮತ್ತು ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಪ್ರಾಥಮಿಕ ಮಾಹಿತಿ ಪ್ರಕಾರ ಕಾರಿನಲ್ಲಿದ್ದವರು ಕೇರಳ ಮೂಲದವರು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಕುಂದಾಪುರ ಸಂಚಾರಿ ಪೋಲಿಸರು ಭೇಟಿ ನೀಡಿ ಪರಿಶೀಲಿಸಿದ್ದು, ಕುಂದಾಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!