Wednesday, June 24, 2026
Homeತಾಜಾ ಸುದ್ದಿಗೋವಾದಲ್ಲಿ ಮೀನುಗಾರಿಕಾ ಹಡಗು ಭಾರತೀಯ ನೌಕಾಪಡೆಯ ಜಲಾಂತರ್ಗಾಮಿ ನೌಕೆಗೆ ಢಿಕ್ಕಿ; ಇಬ್ಬರು ನಾಪತ್ತೆ  

ಗೋವಾದಲ್ಲಿ ಮೀನುಗಾರಿಕಾ ಹಡಗು ಭಾರತೀಯ ನೌಕಾಪಡೆಯ ಜಲಾಂತರ್ಗಾಮಿ ನೌಕೆಗೆ ಢಿಕ್ಕಿ; ಇಬ್ಬರು ನಾಪತ್ತೆ  

- Advertisement -
- Advertisement -

ಗೋವಾ ಕರಾವಳಿ ಪ್ರದೇಶದಲ್ಲಿ ಭಾರತೀಯ ಮೀನುಗಾರಿಕಾ ಹಡಗೊಂದು ಭಾರತೀಯ ನೌಕಾಪಡೆಯ ಜಲಾಂತರ್ಗಾಮಿ ನೌಕೆಗೆ ಡಿಕ್ಕಿ ಹೊಡೆದಿರುವ ಘಟನೆ ನ.22 ಶುಕ್ರವಾರದಂದು ನಡೆದಿದೆ.

ಭಾರತೀಯ ಮೀನುಗಾರಿಕಾ ಹಡಗಿನಲ್ಲಿ 13 ಮಂದಿ ಮೀನುಗಾರರಿದ್ದು, ಇಬ್ಬರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರತೀಯ ನೌಕಾಪಡೆಯ ಆರು ಹಡಗುಗಳು ಹಾಗೂ ವಿಮಾನಗಳ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಈವರೆಗೆ 11 ಮೀನುಗಾರರನ್ನು ರಕ್ಷಿಸಲಾಗಿದೆ. ಇನ್ನು ಇಬ್ಬರು ನಾಪತ್ತೆಯಾಗಿರುವುದಾಗಿ ವರದಿ ವಿವರಿಸಿದೆ.

ಇನ್ನು ಉಳಿದ ಇಬ್ಬರು ರಕ್ಷಣಾ ಕಾರ್ಯಕ್ಕೆ ಮುಂಬೈ ಕರಾವಳಿ ರಕ್ಷಣಾ ಪಡೆಯ ತಂಡದ ಮಾರ್ಗದರ್ಶನವನ್ನು ಪಡೆದು ಕಾರ್ಯಾಚರಣೆ ಮಾಡಲಾಗುತ್ತಿದೆ. ಅಷ್ಟೇ ಅಲ್ಲದೆ ಕರಾವಳಿ ಪಡೆಯ ಮುಳುಗುತಜ್ಞರು ಶೋಧ ಕಾರ್ಯದಲ್ಲಿ ತೊಡಗಿರುವುದಾಗಿ ರಕ್ಷಣಾ ಸಚಿವಾಲಯ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸಿ, ಅಪಘಾತಕ್ಕೆ ಕಾರಣ ಏನೆಂದು ತಿಳಿದುಕೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Latest News

error: Content is protected !!