Sunday, June 29, 2025
Homeಕರಾವಳಿಮಂಗಳೂರುಮಂಗಳೂರು: ಮೂರು ವರ್ಷದ ಮಗುವಿಗೆ ಲೈಂಗಿಕ ಕಿರುಕುಳ ಆರೋಪ; 70 ವರ್ಷದ ಆರೋಪಿ ಅರೆಸ್ಟ್

ಮಂಗಳೂರು: ಮೂರು ವರ್ಷದ ಮಗುವಿಗೆ ಲೈಂಗಿಕ ಕಿರುಕುಳ ಆರೋಪ; 70 ವರ್ಷದ ಆರೋಪಿ ಅರೆಸ್ಟ್

spot_img
- Advertisement -
- Advertisement -

ಮಂಗಳೂರು: ಮೂರು ವರ್ಷದ ಮಗುವಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 70 ವರ್ಷ ಪ್ರಾಯದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಉಳ್ಳಾಲ ತಾಲೂಕಿನ ಬಾಳೆಪುಣಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮುದುಂಗರುಕಟ್ಟೆ ನಿವಾಸಿ ಅಬ್ದುಲ್ಲಾ (70) ಬಂಧಿತ ಆರೋಪಿಯಾಗಿದ್ದಾರೆ.

ಅಡಿಕೆ ಅಂಗಡಿ ಬಳಿ‌ ಆಟವಾಡುತ್ತಿದ್ದ ಮಗುವಿನ ಜೊತೆ ಅನುಚಿತವಾಗಿ ವರ್ತನೆ ಮಾಡಿದ ಅಂಗಡಿ ಮಾಲೀಕ ಅಬ್ದುಲ್ಲಾ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಲಾಗಿದೆ.

ಮಗುವಿನ ಆರೋಗ್ಯದಲ್ಲಿ ಏರುಪೇರು ಆಗಿದ್ದರಿಂದ ಮಗುವನ್ನು‌‌ ತಾಯಿ ಆಸ್ಪತ್ರೆಗೆ ದಾಖಲಿಸಿದ್ದು, ಬಳಿಕ ಪೊಲೀಸ್ ದೂರು ದಾಖಲಿಸಿದ್ದಾರೆ.

ದೂರಿನ ಹಿನ್ನೆಲೆಯಲ್ಲಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ

- Advertisement -
spot_img

Latest News

error: Content is protected !!