- Advertisement -
![]()
- Advertisement -
ಮಂಗಳೂರು: ಇಲ್ಲಿನ ತೋಟ ಬೆಂಗ್ರೆಯ ಅಳಿವೆ ಬಾಗಿಲಿನಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ವೇಳೆ, ಸ್ಥಳೀಯ ಮೀನುಗಾರ ಯುವಕನೋರ್ವ ಈ ಕುರಿತಂತೆ ಪ್ರಶ್ನಿಸಿದ್ದಕ್ಕೆ ಆತನಿಗೆ ಗಂಭೀರವಾಗಿ ಹಲ್ಲೆ ನಡೆಸಿರುವ ಘಟನೆ ಸಂಭವಿಸಿದೆ.
ಘಟನೆಯು ಮುಂಜಾನೆ 2 ಗಂಟೆ ಸುಮಾರಿಗೆ ನಡೆದಿದೆ ಎನ್ನಲಾಗಿದೆ. ಸ್ಥಳೀಯ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದ ವೇಳೆ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದವರನ್ನು ಪ್ರಶ್ನಿಸಿದ್ದರು. ಆಗ ಸುಮಾರು 15 ಮಂದಿಯ ತಂಡ ಹಲ್ಲೆಗೆ ಮುಂದಾಗಿದೆ. ಕೆಲವು ಮೀನುಗಾರರು ಈ ವೇಳೆ ತಪ್ಪಿಸಿಕೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಓರ್ವ ಯುವಕನಿಗೆ ಹಾರೆಯಿಂದ ಬಲವಾದ ಹೊಡೆತ ಬಿದ್ದಿದ್ದು, ಆತನ ಬೆನ್ನು, ಕಣ್ಣು ಮತ್ತು ಮುಖಕ್ಕೆ ಗಂಭೀರ ಗಾಯಗಳಾಗಿವೆ. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಅಕ್ರಮ ಮರಳುಗಾರಿಕೆಯಿಂದ ಅಳಿವೆಬಾಗಿಲಿಗೆ ಹಾನಿಯಾಗುತ್ತಿದ್ದು, ಮೀನುಗಾರಿಕ ಬೋಟ್‌ಗಳ ಚಲನೆಗೆ ತೊಂದರೆಯಾಗಿದೆ ಎಂದು ಮೀನುಗಾರರು ದೂರಿದ್ದಾರೆ.
- Advertisement -


