Monday, June 8, 2026
Homeತಾಜಾ ಸುದ್ದಿಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂಧೆ ರಾಜೀನಾಮೆ

ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂಧೆ ರಾಜೀನಾಮೆ

- Advertisement -
- Advertisement -

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂಧೆ ಅವರು ಮಂಗಳವಾರದಂದು ರಾಜೀನಾಮೆ ನೀಡಿದ್ದಾರೆ. ಇವರು ರಾಜೀನಾಮೆ ನೀಡಿದ ಬೆನ್ನಲ್ಲೇ ಇವರ ಇಡೀ ಸಂಪುಟ ಕೂಡ ರಾಜೀನಾಮೆ ಸಲ್ಲಿಸಿದೆ ಎನ್ನಲಾಗಿದೆ.

ಶಿಂಧೆ ಅವರು ತಮ್ಮ ಪ್ರತಿನಿಧಿಗಳಾದ ದೇವೇಂದ್ರ ಫಡ್ನವಿಸ್ ಮತ್ತು ಅಜಿತ್ ಪವಾರ್ ಅವರೊಂದಿಗೆ ರಾಜ್ಯಪಾಲರನ್ನು ಭೇಟಿ ಮಾಡಲು ರಾಜಭವನಕ್ಕೆ ಆಗಮಿಸಿ, ತನ್ನ ಸ್ಥಾನಕ್ಕೆ ರಾಜಿನಾಮೆ ನೀಡಿದರು.

ಇದೀಗ ಜನರಿಗೆ ಮುಂದಿನ ಮಹಾರಾಷ್ಟ್ರದ ಮುಖ್ಯಮಂತ್ರಿ ಯಾರು ಎಂಬುದೇ ಕುತೂಹಲದ ವಿಷಯವಾಗಿದೆ. ಶಿವಸೇನೆ, ಬಿಜೆಪಿ ಮತ್ತು ಅಜಿತ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಒಳಗೊಂಡಿರುವ ಮಹಾಯುತಿ ಒಕ್ಕೂಟವು ಈಗಷ್ಟೇ ಮುಕ್ತಾಯಗೊಂಡ ರಾಜ್ಯ ಚುನಾವಣೆಯಲ್ಲಿ 288 ಅಸೆಂಬ್ಲಿ ಸ್ಥಾನಗಳಲ್ಲಿ 230 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರವನ್ನು ಉಳಿಸಿಕೊಂಡಿದೆ, ಅಘಾಡಿ ಕೇವಲ 46 ಸ್ಥಾನಗಳೊಂದಿಗೆ ಉಳಿದಿದೆ.

ಇನ್ನು ಸಿಎಂ ಸ್ಥಾನಕ್ಕಾಗಿ ವಿಧಾನಸಭೆ ಚುನಾವಣೆಯಲ್ಲಿ ಭಾರಿ ಬಹುಮತ ಪಡೆದ ನಂತರ ಬಿಜೆಪಿ ಮತ್ತು ಶಿವಸೇನೆ ನಡುವೆ ಪೈಪೋಟಿ ನಡೆಯುತ್ತಿದೆ ಎನ್ನಲಾಗಿದೆ.

- Advertisement -

Latest News

error: Content is protected !!