Thursday, June 25, 2026
Homeತಾಜಾ ಸುದ್ದಿಸಿಎಂ ಆಯ್ಕೆಯಲ್ಲಿ ಶಿವಸೇನೆ ಬಿಜೆಪಿಯ ನಿರ್ಧಾರವನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ; ಏಕನಾಥ ಶಿಂದೆ

ಸಿಎಂ ಆಯ್ಕೆಯಲ್ಲಿ ಶಿವಸೇನೆ ಬಿಜೆಪಿಯ ನಿರ್ಧಾರವನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ; ಏಕನಾಥ ಶಿಂದೆ

- Advertisement -
- Advertisement -

ಮಹಾರಾಷ್ಟ್ರದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಏಕನಾಥ ಶಿಂದೆ ಇದೀಗ ‘ಮುಂದಿನ ಮುಖ್ಯಮಂತ್ರಿ ಆಯ್ಕೆಯಲ್ಲಿ ಬಿಜೆಪಿ ನಾಯಕತ್ವದ ನಿರ್ಧಾರವನ್ನು ಸಂಪೂರ್ಣವಾಗಿ ಬೆಂಬಲಿಸುತ್ತೇವೆ, ಸಿಎಂ ಆಯ್ಕೆ ವಿಚಾರದಲ್ಲಿ ಅಡ್ಡಿಯಾಗುವುದಿಲ್ಲ’ ಎಂದು ತಿಳಿಸಿದ್ದಾರೆ.

ಅವರು ಠಾಣೆಯಲ್ಲಿರುವ ತಮ್ಮ ನಿವಾಸದಲ್ಲಿ ನ. 27ರ ಬುಧವಾರದಂದು ಸುದ್ದಿಗಾರರೊಂದಿಗೆ ಮಾತನಾಡಿ, ‘ಈಗಾಗಲೇ ನಾನು ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದೇನೆ. ಅವರ ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ ಎಂಬ ಭರವಸೆ ಕೊಟ್ಟಿದ್ದೇನೆ’ ಎಂದು ತಿಳಿಸಿದ್ದಾರೆ. 

ಶಿವಸೇನೆಯು ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಬಿಜೆಪಿಯ ನಿರ್ಧಾರವನ್ನು ಬೆಂಬಲಿಸಲಿದೆ  ಎಂದು ತಿಳಿಸಿದ್ದಾರೆ. 

- Advertisement -

Latest News

error: Content is protected !!