Saturday, June 13, 2026
Homeಕರಾವಳಿಉಡುಪಿನರ ದೌರ್ಬಲ್ಯದಿಂದ ಬಳಲುತ್ತಿದ್ದ ಮಹಿಳೆ ಆತ್ಮಹತ್ಯೆ

ನರ ದೌರ್ಬಲ್ಯದಿಂದ ಬಳಲುತ್ತಿದ್ದ ಮಹಿಳೆ ಆತ್ಮಹತ್ಯೆ

- Advertisement -
- Advertisement -

ಕಾರ್ಕಳ: ನಲ್ಲೂರಿನ ಬೋರ್ಕಟ್ಟೆ ನಿವಾಸಿ ಮಹಿಳೆಯೊಬ್ಬರು ಜೀವನದಲ್ಲಿ ಜುಗುಪ್ಸೆಗೊಂಡು ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡ ಮಹಿಳೆ ನಲ್ಲೂರಿನ ಬೋರ್ಕಟ್ಟೆ ನಿವಾಸಿ ಲೀಲಾ (71) ಎಂದು ತಿಳಿದು ಬಂದಿದೆ.

ಇವರಿಗೆ ಏಳು ವರ್ಷದ ಹಿಂದೆ ಮನೆಯಲ್ಲಿ ಬಿದ್ದು ತಲೆಗೆ ಪೆಟ್ಟು ಮಾಡಿಕೊಂಡಿದ್ದರು. ಈ ಘಟನೆಯಿಂದ ನರಕ್ಕೆ ಪೆಟ್ಟಾಗಿ, ನರ ದೌರ್ಬಲ್ಯದಿಂದ ಬಳಲುತ್ತಿದ್ದರು. ಇದಕ್ಕಾಗಿ ಅವರು ಔಷಧವನ್ನು ಕೂಡ ಸೇವಿಸುತ್ತಿದ್ದರು. ಇದೇ ಕಾರಣಕ್ಕೆ ಜೀವನದಲ್ಲಿ ಜುಗುಪ್ಸೆಗೊಂಡು ನ. 27ರಂದು ಬೆಳಗ್ಗೆ 9.45ಕ್ಕೆ ಮನೆಯ ಬಳಿ ಇರುವ ಹೊಳೆಗೆ ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.

- Advertisement -

Latest News

error: Content is protected !!