Wednesday, June 3, 2026
Homeಅಪರಾಧಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಸಂಚು; ಮುಂಬೈ ಟ್ರಾಫಿಕ್​ ಕಂಟ್ರೋಲ್​ ರೂಂಗೆ ಬೆದರಿಕೆ ಕರೆ

ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಸಂಚು; ಮುಂಬೈ ಟ್ರಾಫಿಕ್​ ಕಂಟ್ರೋಲ್​ ರೂಂಗೆ ಬೆದರಿಕೆ ಕರೆ

- Advertisement -
- Advertisement -

ಅಪರಿಚಿತ ಮಹಿಳೆಯೊಬ್ಬರು ಮುಂಬೈ ಟ್ರಾಫಿಕ್​ ಕಂಟ್ರೋಲ್​ ರೂಂಗೆ ಕರೆಮಾಡಿ ಪ್ರಧಾನಿ ನರೇಂದ್ರ ಮೋದಿ ಹತ್ಯೆ ಮಾಡಲು ಸಂಚು ರೂಪಿಸಲಾಗಿದೆ ಎಂದು ತಿಳಿಸಿದ್ದಾರೆ. ಇದೀಗ ಈ ಕರೆ ಭಾರೀ ಆತಂಕಕ್ಕೆ ಕಾರಣವಾಗಿದೆ.

ಈ ಕುರಿತಂತೆ ಮುಂಬೈನ ಅಂಬೋಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಕೆಯನ್ನು ಬಂಧಿಸುವ ಪ್ರಯತ್ನ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈಗಾಗಲೇ ಪೊಲೀಸರು ತನಿಖೆ ಆರಂಭಿಸಿದ್ದು, ಪ್ರಾಥಮಿಕ ವರದಿಗಳ ಪ್ರಕಾರ ಮಹಿಳೆ ಮಾನಸಿಕ ಅಸ್ವಸ್ಥೆ ಎಂದು ಹೇಳಲಾಗುತ್ತಿದೆ. ಅಧಿಕಾರಿಗಳು ಕಾರ್ಯವಿಧಾನಗಳನ್ನು ಅನುಸರಿಸಿ ತನಿಖೆಯನ್ನು ಮುಂದುವರಿಸುತ್ತಿದ್ದಾರೆ. ಆದಷ್ಟು ಬೇಗ ಶಂಕಿತರನ್ನು ಪತ್ತೆಹಚ್ಚಲಾಗುವುದು, ಈ ಕುರಿತಂತೆ ಎಲ್ಲಾ ಪ್ರೋಟೋಕಾಲ್‌ಗಳನ್ನು ಅನುಸರಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Latest News

error: Content is protected !!