Saturday, June 13, 2026
Homeಅಪರಾಧಅಕ್ರಮ ಮರಳುಗಾರಿಕೆಗೆ ಸಹಕಾರ ಆರೋಪ; ಕಾಪು ಉಪ ನಿರೀಕ್ಷಕ ಅಬ್ದುಲ್‌ ಖಾದರ್‌ ಅಮಾನತು

ಅಕ್ರಮ ಮರಳುಗಾರಿಕೆಗೆ ಸಹಕಾರ ಆರೋಪ; ಕಾಪು ಉಪ ನಿರೀಕ್ಷಕ ಅಬ್ದುಲ್‌ ಖಾದರ್‌ ಅಮಾನತು

- Advertisement -
- Advertisement -

ಉಡುಪಿ: ಕಾಪು ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಗೆ ಸಹಕಾರ ಮಾಡಿರುವ ಆರೋಪದಲ್ಲಿ ಕಾಪು ಪೊಲೀಸ್‌ ಠಾಣೆಯ ಉಪ ನಿರೀಕ್ಷಕ ಅಬ್ದುಲ್‌ ಖಾದರ್‌ ಅವರನ್ನು ಅಮಾನತು ಮಾಡಲಾಗಿದೆ.

ಕೆಲವು ದಿನಗಳ ಹಿಂದೆಯಷ್ಟೇ ಕಾಪು ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಯ ಬಗ್ಗೆ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಮರಳು ದಂಧೆಕೋರರೊಂದಿಗೆ ಪಿಎಸ್‌ಐ ಅಬ್ದುಲ್‌ ಖಾದರ್‌ ಸಹಕರಿಸಿದ್ದಾರೆ ಎನ್ನುವುದನ್ನು ತಿಳಿಸುವ ಆಡಿಯೋವೊಂದರ ಬಗ್ಗೆ ಮೇಲಧಿಕಾರಿಗಳಿಗೆ ದೂರು ನೀಡಲಾಗಿತ್ತು.

ದೂರಿನ ಮೇರೆಗೆ ನಡೆಸಲಾದ ಪ್ರಾಥಮಿಕ ತನಿಖೆಯಲ್ಲಿ ಕಾಪು ಠಾಣಾಧಿಕಾರಿ ವಿರುದ್ಧದ ಆರೋಪ ಮೇಲ್ನೋಟಕ್ಕೆ ಸಾಬೀತಾಗಿದ್ದು, ಈ ಹಿನ್ನೆಲೆಯಲ್ಲಿ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ.

- Advertisement -

Latest News

error: Content is protected !!