Friday, June 27, 2025
HomeWorldಚಿನ್ಮಯ್ ಕೃಷ್ಣ ದಾಸ್ ಸೇರಿ 17 ಮಂದಿಯ ಬ್ಯಾಂಕ್ ಖಾತೆ ಸ್ಥಗಿತಕ್ಕೆ ಆದೇಶ

ಚಿನ್ಮಯ್ ಕೃಷ್ಣ ದಾಸ್ ಸೇರಿ 17 ಮಂದಿಯ ಬ್ಯಾಂಕ್ ಖಾತೆ ಸ್ಥಗಿತಕ್ಕೆ ಆದೇಶ

spot_img
- Advertisement -
- Advertisement -

ಢಾಕಾ: ಹಿಂದೂ ಪುರೋಹಿತ, ಆಧ್ಯಾತ್ಮಿಕ ನಾಯಕ ಚಿನ್ಮಯ್ ಕೃಷ್ಣ ದಾಸ್ ಅವರನ್ನು ಬಾಂಗ್ಲಾದಲ್ಲಿ ಬಂಧಿಸಲಾಗಿದ್ದು, ಈ ಕುರಿತಂತೆ ಇಡೀ ದೇಶದಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಚಿನ್ಮಯ್ ಕೃಷ್ಣ ದಾಸ್ ಸೇರಿದಂತೆ ಹದಿನೇಳು ಮಂದಿಯ ಬ್ಯಾಂಕ್ ಖಾತೆಗಳನ್ನು ಮುಂದಿನ 30 ದಿನಗಳವರೆಗೆ ಸ್ಥಗಿತಗೊಳಿಸುವಂತೆ ಬಾಂಗ್ಲಾದೇಶದ ಹಣಕಾಸು ಅಧಿಕಾರಿಗಳು ಆದೇಶ ನೀಡಿರುವುದಾಗಿ ಬಾಂಗ್ಲಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಈ ಆದೇಶವನ್ನು ಬಾಂಗ್ಲಾದೇಶ ಹಣಕಾಸು ಗುಪ್ತಚರ ಘಟಕದ (ಬಿಎಫ್‌ಐಯು) ಆದೇಶದ ಮೇರೆಗೆ ಹೊರಡಿಸಲಾಗಿದ್ದು, ಬ್ಯಾಂಕ್ ಹಾಗೂ ಹಣಕಾಸು ಸಂಸ್ಥೆಗಳಿಗೆ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಈ ಕುರಿತಂತೆ ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರು ಹಿಂದೂ ನಾಯಕ ಚಿನ್ಮಯ್ ಕೃಷ್ಣ ದಾಸ್ ಬಂಧನ ನ್ಯಾಯ ಸಮ್ಮತವಲ್ಲವೆಂದು, ಅವರನ್ನು ಕೂಡಲೇ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

- Advertisement -
spot_img

Latest News

error: Content is protected !!