Saturday, June 6, 2026
Homeತಾಜಾ ಸುದ್ದಿಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್ ಐ ಆರ್ ದಾಖಲು

ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್ ಐ ಆರ್ ದಾಖಲು

- Advertisement -
- Advertisement -

ಬೆಂಗಳೂರು: ಜಾತಿ ನಿಂದನೆ,ಕೊಲೆ ಬೆದರಿಕೆ, ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿ ರಿಲೀಸ್ ಆಗಿದ್ದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್ ಐ ಆರ್ ದಾಖಲಾಗಿದೆ. ಜೈಲಿನಿಂದ ಹೊರ ಬಂದ ಕೆಲವೇ ದಿನಗಳಲ್ಲಿ ಎಫ್ ಐ ಆರ್ ದಾಖಾಗಿದೆ.

ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತರೊಬ್ಬರು ಬಿಜೆಪಿ ಶಾಸಕ ಮುನಿರತ್ನ ನಾಯ್ಡು ವಿರುದ್ಧ ಕೊಲೆ ಆರೋಪದಡಿ ದೂರು ನೀಡಿದ್ದರು.

ಈ ದೂರು ಆಧರಿಸಿ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಶಾಸಕ ಮುನಿರತ್ನ ವಿರುದ್ಧ ನೀಡಿರುವಂತ ದೂರಿನಲ್ಲಿ ಕೊಲೆ ಯತ್ನ ಹಾಗೂ ಸುಫಾರಿ ಕೊಟ್ಟು ಕೊಲೆಗೆ ಪ್ರಯತ್ನಿಸಿರುವ ಆರೋಪ ಮಾಡಲಾಗಿದೆ. ಹೀಗಾಗಿಯೇ ಅವರ ವಿರುದ್ಧ ಕೊಲೆ ಆರೋಪದಡಿ ಎಫ್‌ಐಆರ್ ಅನ್ನು ಪೊಲೀಸರು ದಾಖಲಿಸಿದ್ದಾರೆ.

- Advertisement -

Latest News

error: Content is protected !!