Friday, June 5, 2026
Homeಅಪರಾಧನಟಿ ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್

ನಟಿ ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್

- Advertisement -
- Advertisement -

ಮುಂಬೈ: ನಟಿ ಶಿಲ್ಪಾ ಶೆಟ್ಟಿ ಅವರ ಪತಿ ಮತ್ತು ಉದ್ಯಮಿ ರಾಜ್ ಕುಂದ್ರಾ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ)ಯು ಮೊಬೈಲ್‌ ಆ್ಯಪ್‌ ಮೂಲಕ ಅಶ್ಲೀಲ ಚಿತ್ರಗಳ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದ ಹಣಕಾಸು ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಸಮನ್ಸ್ ನೀಡಿದೆ ಎನ್ನಲಾಗಿದೆ.

ಕುಂದ್ರಾಗೆ ಪ್ರಕರಣದ ವಿಚಾರಣೆಗಾಗಿ ಸೋಮವಾರ ತನಿಖಾಧಿಕಾರಿ ಮುಂದೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ. ಅವರಿಗೆ ಮಾತ್ರವಲ್ಲದೇ ಈ ಪ್ರಕರಣಕ್ಕೆ ಸಂಬಂಧಿಸಿ ಇತರ ಕೆಲ ವ್ಯಕ್ತಿಗಳಿಗೂ ಸಮನ್ಸ್ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ನವೆಂಬರ್ 29 ರಂದು, ಉದ್ಯಮಿ ರಾಜ್ ಕುಂದ್ರಾ ಅವರ ಮುಂಬೈ ನಿವಾಸ ಮತ್ತು ಕಚೇರಿಗಳು ಸೇರಿದಂತೆ ಏಕಕಾಲದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದರು, ಮುಂಬೈ ಮಾತ್ರವಲ್ಲದೆ ಉತ್ತರ ಪ್ರದೇಶದಲ್ಲಿರುವ ಕೆಲವು ಪ್ರದೇಶಗಳಲ್ಲೂ ಅಧಿಕಾರಿಗಳು ದಾಳಿ ನಡೆಸಿ ಅಗತ್ಯ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿತ್ತು. ಅಷ್ಟೇ ಅಲ್ಲದೆ ಕ್ರಿಪ್ಟೋ ಕರೆನ್ಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವರ್ಷದ ಆರಂಭದಲ್ಲಿ ಕುಂದ್ರಾ ಮತ್ತು ಶಿಲ್ಪಾ ಶೆಟ್ಟಿ ಅವರ 98 ಕೋಟಿ ಮೌಲ್ಯದ ಆಸ್ತಿಯನ್ನು ಇಡಿ ವಶಕ್ಕೆ ಪಡೆದುಕೊಂಡಿತ್ತು ಎನ್ನಲಾಗಿದೆ.

- Advertisement -

Latest News

error: Content is protected !!