Saturday, June 6, 2026
Homeತಾಜಾ ಸುದ್ದಿಆರೋಪಿ ನಟ ದರ್ಶನ್‌ಗೆ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ; ಸಾಮಾಜಿಕ ಜಾಲತಾಣದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಫೋಟೋ...

ಆರೋಪಿ ನಟ ದರ್ಶನ್‌ಗೆ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ; ಸಾಮಾಜಿಕ ಜಾಲತಾಣದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಫೋಟೋ ವೈರಲ್

- Advertisement -
- Advertisement -

ಬೆಂಗಳೂರು: ನಟ ದರ್ಶನ್‌ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿದ್ದು, ಇದೀಗ ದರ್ಶನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಫೋಟೋ ವೈರಲ್ ಆಗಿದೆ.

ತುರ್ತು ಚಿಕಿತ್ಸೆಗಾಗಿಯೇ ಹೈಕೋರ್ಟ್ ನಟ ದರ್ಶನ್‌ಗೆ 6 ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿದ್ದು, ಕಳೆದ 4 ವಾರಗಳಿಂದ ಬಿಜಿಎಸ್‌ ಆಸ್ಪತ್ರೆಯಲ್ಲಿ ಪಿಸಿಯೋಥೆರಪಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.

ಇನ್ನೊಂದೆಡೆ ಆರೋಪಿ ನಟ ದರ್ಶನ್ ರೆಗ್ಯೂಲರ್‌ ಬೇಲ್‌ಗೆ ಅರ್ಜಿ ಸಲ್ಲಿಸಿದ್ದು, ಅದರ ವಿಚಾರಣೆ ಕೋರ್ಟ್‌ನಲ್ಲಿ ನಡೆಯುತ್ತಿದೆ.

ಇನ್ನು 9 ದಿನಗಳು ಕಳೆದರೆ ಮತ್ತೆ ದರ್ಶನ್ ಜೈಲಿಗೆ ವಾಪಸ್ಸಾಗಬೇಕು. ಆದರೆ ಇದೀಗ ಮಾತ್ರ ದರ್ಶನ್‌ ಅವರು ಚಿಕಿತ್ಸೆ ಪಡೆಯುತ್ತಿರುವ ಫೋಟೋ ಜಾಲತಾಣದಲ್ಲಿ ಹರಿದಾಡುತ್ತಿದೆ.

- Advertisement -

Latest News

error: Content is protected !!