Friday, June 5, 2026
Homeಕರಾವಳಿಉಡುಪಿಕುಂದಾಪುರ: ಮದುವೆ ನಿಗದಿಯಾಗಿದ್ದ ಯುವಕ ನಾಪತ್ತೆ

ಕುಂದಾಪುರ: ಮದುವೆ ನಿಗದಿಯಾಗಿದ್ದ ಯುವಕ ನಾಪತ್ತೆ

- Advertisement -
- Advertisement -

ಕುಂದಾಪುರ: ಮದುವೆ ನಿಗದಿಯಾಗಿದ್ದ ಯುವಕ ನಾಪತ್ತೆಯಾಗಿರುವ ಘಟನೆ ಕೋಟೇಶ್ವರ ಗ್ರಾಮದಲ್ಲಿ ನಡೆದಿದೆ. ಕಾರ್ತಿಕ್(28) ನಾಪತ್ತೆಯಾದ ಯುವಕ. ಕೋಟೇಶ್ವರ ಗ್ರಾಮದ ಜಯಲಕ್ಷ್ಮೀ ಎಂಬವರ ಜೊತೆ ಕಾರ್ತಿಕ್ ವಿವಾಹ ಡಿಸೆಂಬರ್ 5 ರಂದು ನಿಗದಿಯಾಗಿತ್ತು. ಅದರಂತೆ ಜು.16ರಂದು ಮದುವೆ ನೊಂದಣಿ ಮಾಡಿಕೊಂಡಿದ್ದರು. ನ.27ರಂದು ಅಪರಾಹ್ನ ವೇಳೆ ಕಾರ್ತಿಕ್, ಜಯಲಕ್ಷ್ಮೀಗೆ ಕರೆ ಮಾಡಿ, ತಾನು ಕೋಟೇಶ್ವರದಲ್ಲಿದ್ದು ತನ್ನ ತಾಯಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಇದೆ ಎಂದು ಹೇಳಿ ಹೋಗಿದ್ದರು.

ನಂತರ ಅವರು ವಾಪಾಸ್ಸು ಬಾರದೇ ಮೊಬೈಲ್ ಸ್ವಿಚ್‌ಆಫ್ ಮಾಡಿ ಕೊಂಡು ನಾಪತ್ತೆಯಾಗಿದ್ದಾರೆ ಎಂದು ದೂರಲಾಗಿದೆ. 5.6 ಅಡಿ ಎತ್ತರ, ಗೋದಿ ಮೈಬಣ್ಣ, ಎಡಗೈ ಮೇಲೆ ಮಾರ್ಕ್, ಬಲಕಿವಿಯಲ್ಲಿ ಚಿನ್ನದ ರಿಂಗ್ ಇರುತ್ತದೆ. ಈ ಬಗ್ಗೆ  ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

Latest News

error: Content is protected !!