Friday, June 26, 2026
Homeಕರಾವಳಿಮಂಗಳೂರುಬಾಂಗ್ಲಾ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

ಬಾಂಗ್ಲಾ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

- Advertisement -
- Advertisement -

ಮಂಗಳೂರು: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲಿನ ದೌರ್ಜನ್ಯವನ್ನು ಖಂಡಿಸಿ ಮಂಗಳೂರಿನಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಯಿತು.

ದಕ್ಷಿಣ ಕನ್ನಡ ಜಿಲ್ಲಾ ಹಿಂದೂ ಹಿತ ರಕ್ಷಣಾ ಸಮಿತಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಆರ್ ಎಸ್ ಎಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಮಾಜಿ ಶಾಸಕ ಸಂಜೀವ ಮಠಂದೂರು ಮತ್ತು ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಭಾಗವಹಿಸಿದ್ದರು.

ಅಲ್ಲದೇ, ವಿವಿಧ ಸ್ವಾಮೀಜಿಗಳು, ಸಂಘ ಪರಿವಾರದ ಮುಖಂಡರು ಮತ್ತು ಹಿಂದೂ‌ ಕಾರ್ಯಕರ್ತರು‌ ಕೂಡಾ ಸಾಕಷ್ಟು ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಇದೇ ವೇಳೆ, ಅಂಬೇಡ್ಕರ್ ವೃತ್ತದಿಂದ ಮಿನಿ ವಿಧಾನಸೌಧದವರೆಗೆ ಪ್ರತಿಭಟನಾ ಮೆರವಣಿಗೆ ಕೂಡಾ ನಡೆಯಿತು.

- Advertisement -

Latest News

error: Content is protected !!