Saturday, June 13, 2026
Homeಅಪರಾಧಪ್ರತಿಷ್ಠಿತ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ನಡೆಯುತ್ತಿದೆ ಸೀಟ್ ಬ್ಲಾಕ್ ದಂಧೆ;  10 ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು

ಪ್ರತಿಷ್ಠಿತ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ನಡೆಯುತ್ತಿದೆ ಸೀಟ್ ಬ್ಲಾಕ್ ದಂಧೆ;  10 ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು

- Advertisement -
- Advertisement -

ಬೆಂಗಳೂರು: ಇಲ್ಲಿನ ಪ್ರತಿಷ್ಠಿತ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಗ್ಯಾಂಗೊಂದು ಸೀಟ್ ಬ್ಲಾಕ್ ಮಾಡುವ ದಂಧೆಯಲ್ಲಿ ತೊಡಗಿಕೊಂಡಿದ್ದು, ಇದಕ್ಕೆ ಸಂಬಂಧಪಟ್ಟಂತೆ 10 ಆರೋಪಿಗಳನ್ನು ಮಲ್ಲೇಶ್ವರಂ ಪೊಲೀಸರು ಬಂಧಿಸಿದ್ದಾರೆ.

ಈಗಗಾಲೇ ಈ ಪ್ರಕರಣದಲ್ಲಿ ಒಟ್ಟು 10 ಜನರನ್ನು ಬಂಧಿಸಲಾಗಿದ್ದು, ಬಂಧಿತ ಆರೋಪಿಗಳ ಪೈಕಿ ಕೆಲವರನ್ನು ಹರ್ಷ, ಪ್ರಕಾಶ್, ರವಿಶಂಕರ್, ಪುನೀತ್, ಶಶಿಕುಮಾರ್, ಪುರುಷೋತ್ತಮ್, ಅವಿನಾಶ್ ಎಂದು ಗುರುತಿಸಲಾಗಿದೆ.

ಆರೋಪಿಗಳ ತಂಡವು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕೌನ್ಸಲಿಂಗ್‌ಗೆ ಹಾಜರಾಗಿ ಕಾಲೇಜು ಆಯ್ಕೆಯಾಗದೇ ಇರುವವರನ್ನು ಗುರಿಯಾಗಿಸಿಕೊಂಡು, ಪ್ರತಿಷ್ಠಿತ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಸೀಟ್ ಬ್ಲಾಕ್ ದಂಧೆ ಮಾಡುತ್ತಿದ್ದರು. ಈ ಕಾರಣದಿಂದಲೇ 2,625 ವಿದ್ಯಾರ್ಥಿಗಳು ನಾನಾ ಕಾರಣಗಳಿಂದ ಸೀಟ್ ರಿಜೆಕ್ಟ್ ಮಾಡಿದ್ದರು ಎನ್ನಲಾಗಿದೆ. 

- Advertisement -

Latest News

error: Content is protected !!