ಉಡುಪಿ: ಸಂಸದ ಕೋಟ ಹಾಗೂ ಚೌಟ ನೇತೃತ್ವದ ತಂಡ ಕರಾವಳಿಯ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66 ರ ಸಮಸ್ಯೆಗೆ ಪರಿಹಾರ ನೀಡುವಂತೆ ಒತ್ತಾಯಿಸಿ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಈ ಕುರಿತಂತೆ ಚರ್ಚೆ ನಡೆಸಿದರು.
ಈ ರಾಷ್ಟ್ರೀಯ ಹೆದ್ದಾರಿಯಿಂದ ಹಲವಾರು ಲೋಪದೋಷಗಳು ಉಂಟಾಗಿದೆ. ನಂತೂರು ಜಂಕ್ಷನ್, ಉಡುಪಿಯ ಅಂಬಲಪಾಡಿಯ ಮೇಲ್ಸೇತುವೆ ಕಟಪಾಡಿ, ಬ್ರಹ್ಮಾವರದ ಆಕಾಶವಾಣಿಯ ತಿರುವಿನ ಅಂಡರ್ ಪಾಸ್ ಸೇರಿದಂತೆ ಹಲವು ರಸ್ತೆಗಳ ಸಮಸ್ಯೆಯನ್ನು ಅವರಿಗೆ ತಿಳಿಸಿದರು. ಹಾಗೆಯೇ ಇವುಗಳ ಸಮಸ್ಯೆಯನ್ನು ಶೀಘ್ರದಲ್ಲಿ ಪರಿಹರಿಸುವ ಉನ್ನತ ಮಟ್ಟದ ತಜ್ಞ ಇಂಜಿನಿಯರ್ ಗಳ ಸಮಿತಿಯೊಂದನ್ನು ರಚಿಸಿ NH.66ರ ಬಗ್ಗೆ ಅಧ್ಯಯನ ನಡೆಸಿ ಅವೈಜ್ಞಾನಿಕವಾಗಿ ನಿರ್ಮಾಣಗೊಂಡ ಚಹರೆಗಳನ್ನು ಪುನರ್ ನಿರ್ಮಿಸಬೇಕೆಂದು ಚರ್ಚೆ ನಡೆಸಿದರು. ಅಷ್ಟೇ ಅಲ್ಲದೆ ಬ್ರಹ್ಮಾವರ, ಕೋಟ, ಕುಂದಾಪುರ ರಸ್ತೆಯ ಸಮಸ್ಯೆಗಳನ್ನು ಹಾಗೂ ಅದನ್ನು ದುರಸ್ತಿಗೊಳಿಸುವಂತೆ ಅಧಿಕಾರಗಳಿಗೆ ಸೂಚಿಸಿದರು.
ಎಲ್ಲಾ ಸಮಸ್ಯೆಗಳನ್ನು ಆಲಿಸಿದ ಸಚಿವ ನಿತಿನ್ ಗಡ್ಕರಿ ಅವರು, ‘ಎಲ್ಲಾ ಸಮಸ್ಯೆಗಳ ವರದಿಯನ್ನು ಸಂಪೂರ್ಣ ವಿಡಿಯೋ ರೆಕಾರ್ಡ್ ಮಾಡಿ ಸಲ್ಲಿಸುವಂತೆ,’ ಸ್ಥಳದಲ್ಲಿರುವ ಅಧಿಕಾರಿಗಳಿಗೆ ಸಚಿವ ನಿತಿನ್ ಗಡ್ಕರಿ ಆದೇಶ ನೀಡಿದರು. ಈ ವೇಳೆಯಲ್ಲಿ ಕರ್ನಾಟಕ ರಾಜ್ಯ ಮತ್ತು ಕರಾವಳಿ ರಸ್ತೆಗಳ ಸುಧಾರಣೆಗಾಗಿ ಸೆಂಟ್ರಲ್ ರೋಡ್ ಫಂಡ್ ನಿಂದ ರಾಜ್ಯಕ್ಕೆ ಅನುದಾನ ನೀಡುವುದಾಗಿ ಸಚಿವರು ಭರವಸೆ ನೀಡಿದರು ಎನ್ನಲಾಗಿದೆ.
ಸಂದರ್ಭದಲ್ಲಿ ಮಂಜುನಾಥ ಕೋಲಾರ, ಸಂಸದ ಮಲ್ಲೇಶ್, ಶಾಸಕ ಯಶ್ ಪಾಲ್ ಸುವರ್ಣ, ಉದ್ಯಮಿ ಜಿ ಶಂಕರ್ ಬಿಜೆಪಿ ಮುಖಂಡರಾದ ಸುರೇಶ್ ನಾಯಕ್ ಮುಂತಾದವರು ಉಪಸ್ಥಿತರಿದ್ದರು.


