Saturday, June 6, 2026
Homeಕರಾವಳಿಉಡುಪಿಉಡುಪಿ: ಬಿಯರ್ ಬಾಟಲಿಯಿಂದ ಕತ್ತು ಸೀಳಿ ವ್ಯಕ್ತಿ ಸಾವು ಪ್ರಕರಣಕ್ಕೆ ಟ್ವಿಸ್ಟ್; ತನಿಖೆಗೆ ವೇಳೆ ಗೊತ್ತಾಯ್ತು...

ಉಡುಪಿ: ಬಿಯರ್ ಬಾಟಲಿಯಿಂದ ಕತ್ತು ಸೀಳಿ ವ್ಯಕ್ತಿ ಸಾವು ಪ್ರಕರಣಕ್ಕೆ ಟ್ವಿಸ್ಟ್; ತನಿಖೆಗೆ ವೇಳೆ ಗೊತ್ತಾಯ್ತು ನಿಜಾಂಶ

- Advertisement -
- Advertisement -

ಉಡುಪಿ: ಮಣಿಪಾಲದ ವಿ.ಪಿ.ನಗರದ ಅನಂತ ಕಲ್ಯಾಣ ನಗರ ಕ್ರಾಸ್‌ನ ರಸ್ತೆಯ ಬದಿಯಲ್ಲಿ ಬಿಯರ್ ಬಾಟಲಿಯಿಂದ ಕತ್ತು ಸೀಳಿ ವ್ಯಕ್ತಿ ಸಾವನ್ನಪ್ಪಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಇದು ಕೊಲೆ ಅಲ್ಲ ಆತ್ಮಹತ್ಯೆ ಅನ್ನೋದು ತನಿಖೆಗೆ ವೇಳೆ ಗೊತ್ತಾಗಿದೆ.


ಮಣಿಪಾಲದ ವಿ.ಪಿ.ನಗರದ ಅನಂತ ಕಲ್ಯಾಣ ನಗರ ಕ್ರಾಸ್‌ನ ರಸ್ತೆಯ ಬದಿಯಲ್ಲಿ ಹೊಟೇಲ್ ಕಾರ್ಮಿಕರಾಗಿದ್ದ ಕಾಸರಗೋಡಿನ ಶ್ರೀಧರ್ (38) ಅವರ ಮೃತದೇಹ ಬಿಯರ್ ಬಾಟಲಿಯಿಂದ ಕತ್ತು ಕೊಯ್ದ ಸ್ಥಿತಿಯಲ್ಲಿ ನಿನ್ನೆ ಪತ್ತೆಯಾಗಿತ್ತು. ಆರಂಭದಲ್ಲಿ ಇದು ಕೊಲೆ ಎಂದು ಅಂದಾಜಿಸಲಾಗಿತ್ತು. ಅದರಂತೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ ಆತನೇ ಕತ್ತು ಸೀಳಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಪೊಲೀಸರು ಹೇಳಿದ್ದಾರೆ. ಅದರಂತೆ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರಿದಿದೆ ಎಂದು ಎಸ್‌ಪಿ ಡಾ| ಅರುಣ್‌ ಕೆ. ಅವರು ತಿಳಿಸಿದ್ದಾರೆ.

ಶ್ರೀಧರ್ ಸಿಂಡಿಕೇಟ್‌ ಸರ್ಕಲ್‌ನಿಂದ ಕಾಲ್ನಡಿಗೆಯಲ್ಲಿ ಬಂದು ಏಕಾಏಕಿ ಕತ್ತು ಸೀಳಿಕೊಂಡಿದ್ದಾರೆ. ಈ ದೃಶ್ಯಾವಳಿಗಳು ಸ್ಥಳೀಯ ಅಂಗಡಿಯೊಂದರ ಸಿಸಿ ಕೆಮರಾದಲ್ಲಿ ದಾಖಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

- Advertisement -

Latest News

error: Content is protected !!