Saturday, June 6, 2026
Homeತಾಜಾ ಸುದ್ದಿಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಪ್ರತಿಭಟನಾಕಾರರ ಮೇಲೆ ಪೊಲೀಸರ ಲಾಠಿ ಚಾರ್ಜ್‌

ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಪ್ರತಿಭಟನಾಕಾರರ ಮೇಲೆ ಪೊಲೀಸರ ಲಾಠಿ ಚಾರ್ಜ್‌

- Advertisement -
- Advertisement -

ಬೆಳಗಾವಿ: ಲಿಂಗಾಯತ ಪಂಚಮಸಾಲಿಗೆ 2ಎ ಮೀಸಲಾತಿಗೆ ಆಗ್ರಹಿಸಿ ಮಂಗಳವಾರದಂದು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಪಂಚಮಸಾಲಿ ಸಮುದಾಯ ಮುಂದಾಗಿದ್ದು, ಇದೀಗ ಪಂಚಮಸಾಲಿ ಹೋರಾಟ ಹಿಂಸಾಚಾರಕ್ಕೆ ತಿರುಗಿದ್ದು ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್‌ ಮಾಡಿದ್ದಾರೆ.

ಪಂಚಮಸಾಲಿ ಸಮುದಾಯದವರು ಇಂದು ಮಧ್ಯಾಹ್ನ ಸುವರ್ಣ ಸೌಧ ಮುತ್ತಿಗೆ ಹಾಕಲು ಬಂದಿದ್ದು, ಈ ವೇಳೆಯಲ್ಲಿ ಹೋರಾಟಗಾರರನ್ನು ಪೊಲೀಸರು ದಾರಿಯಲ್ಲೇ ತಡೆದಿದ್ದಾರೆ. ಮುತ್ತಿಗೆ ಹಾಕಲು ಅನುಮತಿ ನೀಡುವುದಿಲ್ಲ ಎಂದು ಪೊಲೀಸರು ತಿಳಿಸಿದರೂ ಪ್ರತಿಭಟನಾಕಾರರು ಪಟ್ಟುಹಿಡಿದಿದ್ದಾರೆ ಎನ್ನಲಾಗಿದೆ.

ಇನ್ನು ಹೋರಾಟದ ಸಂದರ್ಭದಲ್ಲಿ ತಳ್ಳಾಟ ನೂಕಾಟ ನಡೆದಿದ್ದು, ಹಲವರು ಪೊಲೀಸರ ಮೇಲೆಯೇ ಚಪ್ಪಲಿ, ಕಲ್ಲು ಎಸೆದಿದ್ದಾರೆ. ಮೈ ಮೇಲೆಯೇ ಕಲ್ಲುತೂರಿದ್ದಕ್ಕೆ ಸಿಟ್ಟಾದ ಪೊಲೀಸರು ಪ್ರತಿಭಟನಾ ನಿರತರ ಮೇಲೆ ಲಾಠಿ ಬೀಸಿದ್ದಾರೆ. ಲಾಠಿ ಬೀಸುತ್ತಿದ್ದಂತೆ ಪ್ರತಿಭಟನಾ ನಿರತರು ದಿಕ್ಕಾಪಾಲಾಗಿ ಓಡಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!